
CHITRADURGA NEWS | 01 SEPTEMBER 2025
ಚಿತ್ರದುರ್ಗ: ನಗರದ ಕೆಳಗೋಟೆ ಹೌಸಿಂಗ್ ಬೋರ್ಡ್ ಹತ್ತಿರ ಹೈಮಾಸ್ಟ್ ಲೈಟ್ ಹಾಕಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು ಮತ್ತು ಜೆಎಂಐಟಿ ಕಾಲೇಜು ಹತ್ತಿರ ಪಾದಾಚಾರಿ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ಬೇಗ ಪ್ರಾರಂಭ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ವಿದ್ಯಾರ್ಥಿ ವೇತನ | ಆಧಾರ್ ಸೀಡಿಂಗ್ ಅಭಿಯಾನ
ಚಿತ್ರದುರ್ಗ ನಗರದ ಕೆಳಗೋಟೆ ಹೌಸಿಂಗ್ ಬೋರ್ಡ್ ಹತ್ತಿರ ಸಾರ್ವಜನಿಕ ಸುಗಮ ಸಂಚಾರಕ್ಕೆ ಕ್ಯಾಟ್ ಐ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಜೆಎಂಐಟಿ ಹತ್ತಿರ ಪಾದಾಚಾರಿಗಳಿಗೆ ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದ್ದು, ಗುತ್ತಿಗೆದಾರರನ್ನು ನಿಗಧಿಪಡಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
