ಮುಖ್ಯ ಸುದ್ದಿ
ಮಾರ್ಚ್ ನಲ್ಲಿ ಚಿತ್ರದುರ್ಗದಲ್ಲಿ ಉದ್ಯೋಗ ಮೇಳ | ಯುವ ಜನತೆಗೆ ಉದ್ಯೋಗಾವಕಾಶ | ಡಿಸಿ ಟಿ.ವೆಂಕಟೇಶ್
CHITRADURGA NEWS | 13 FEBRUARY 2025
ಚಿತ್ರದುರ್ಗ: ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದಲ್ಲಿ ಉದ್ಯೋಗ ಮೇಳವನ್ನು ಮುಂಬರುವ ಮಾರ್ಚ್ ತಿಂಗಳ 2ನೇ ವಾರದಲ್ಲಿ ಆಯೋಜಿಸಲಾಗುವುದು, ಮೇಳದ ಯಶಸ್ವಿಗೆ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
Also Read: PDO ಸೇವೆಯಿಂದ ಅಮಾನತು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಉದ್ಯೋಗ ಮೇಳ ಆಯೋಜಿಸುವ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2024-25ನೇ ಸಾಲಿಗೆ ಸಂಜೀವಿನಿ-ಕೆಎಸ್‍ಅರ್‍ಎಲ್‍ಪಿಎಸ್-
ಉದ್ಯೋಗ ಮೇಳ ಆಯೋಜನೆಗೆ ಸಂಬಂಧಪಟ್ಟಂತೆ ಉಪವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ, ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಹೇಳಿದರು.
Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಜಿಲ್ಲೆಯಲ್ಲಿ ನಡೆಯುವ ಉದ್ಯೋಗ ಮೇಳ ಆಯೋಜನೆ ಕುರಿತು ಕಾಲೇಜುಗಳಲ್ಲಿ ಹಾಗೂ ವೃತಿಪರ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳು ಸಹ ಉದ್ಯೋಗದ ಮೇಳದ ಬಗ್ಗೆ ಮಾಹಿತಿ ನೀಡಬೇಕು.
ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ
ಮೇಳದಲ್ಲಿ ಭಾಗವಹಿಸುವ ಉದ್ಯೋಗಾಂಕ್ಷಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದ ಅವರು, ಉದ್ಯೋಗ ಮೇಳದ ನೋಂದಣಿ ಪ್ರಕ್ರಿಯೆ ಪ್ರಾರಂಭ ಮಾಡುವಂತೆ ಹಾಗೂ ನೊಂದಣಿ ಪ್ರಕ್ರಿಯೆ ಕುರಿತು ವ್ಯಾಪಕ ಪ್ರಚಾರ ನೀಡಬೇಕು, ಜಿಲ್ಲಾ ವೆಬ್‍ಸೈಟ್‍ನಲ್ಲಿಯೂ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹೆಚ್ಚಿನ ಕಂಪನಿಗಳು ಭಾಗವಹಿಸಲು ಕ್ರಮವಹಿಸಿ: ಜಿಲ್ಲೆಯ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲು ವಿವಿಧ ಇಲಾಖೆಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
Also Read: ಬುರುಜನಹಟ್ಟಿಯ ಬಾಳೆಮಂಡಿ ಸಿ.ಜಿ.ಕೃಷ್ಣ ನಿಧನ
ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಉಪನಿರ್ದೇಶಕರು, ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಜಿಟಿಟಿಸಿ ಪ್ರಾಂಶುಪಾಲರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಬೇಕು.
ಜಿಲ್ಲೆಯಲ್ಲಿ ಆಯೋಜಿಸುವ ಉದ್ಯೋಗ ಮೇಳದಲ್ಲಿ ಕನಿಷ್ಟ 300 ರಿಂದ 500 ಯುವ ಜನರಿಗೆ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಹೇಳಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೊಂದಿಗೆ ಸಂಪರ್ಕ ಸಾಧಿಸಿ, ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶದ ಅವಶ್ಯವಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳ ಪ್ರತಿನಿಧಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸಲಹೆ ನೀಡಿದರು.
Also Read: ಎರಡು ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕುಮಾರ್ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪದವಿ, ಐಟಿಐ, ಜಿಟಿಟಿಸಿ, ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ಇದ್ದರು.