CHITRADURGA NEWS | 30 DECEMBER 2025
ಚಿತ್ರದುರ್ಗ: ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಆವರಣದಲ್ಲಿ 2026 ರ ಜನವರಿ 30 ರಂದು ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹೇಳಿದರು.
ಇದನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರ | ಮತದಾರರ ಅಂತಿಮ ಪಟ್ಟಿ ಪ್ರಕಟ | ಜಿಲ್ಲೆಯಲ್ಲಿ 41,358 ಮತದಾರರು
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಉದ್ಯೋಗ ಮೇಳ ಆಯೋಜಿಸುವ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಜೀವಿನಿ-ಕೆಎಸ್ಆರ್ಎಲ್ಪಿಎಸ್-ಡಿಡಿಯುಜಿಕೆವೈ ಯೋಜನೆ, ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಮೇಳದ ಯಶಸ್ವಿಗೆ ಉಪಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಮುಖ್ಯಸ್ಥರು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ನಡೆಯುವ ಉದ್ಯೋಗ ಮೇಳ ಆಯೋಜನೆ ಕುರಿತು ಕಾಲೇಜುಗಳಲ್ಲಿ ಹಾಗೂ ವೃತಿಪರ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗದ ಮೇಳದ ಬಗ್ಗೆ ಮಾಹಿತಿ ನೀಡಬೇಕು. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಪ್ರತ್ಯೇಕ ವೆಬ್ ಲಿಂಕ್ ರಚಿಸಿ ವ್ಯಾಪಕ ಪ್ರಚಾರ ನೀಡುವಂತೆ ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಸೂಚಿಸಿದರು.
ಇದನ್ನೂ ಓದಿ: ವಸತಿ ಶಾಲೆ ಅವ್ಯವಸ್ಥೆಗೆ ರಾಜ್ಯ ಆಹಾರ ಆಯೋಗ ಅಸಮಧಾನ
ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ, ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಜಿಲ್ಲಾ ಉದ್ಯೋಗಾಧಿಕಾರಿ ರವಿಚಂದ್ರ, ಜಿ.ಟಿ.ಟಿ.ಸಿ ಪ್ರಾಂಶುಪಾಲ ಸುಹಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪದವಿ, ಐಟಿಐ, ಇಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

