
CHITRADURGA NEWS | 10 JULY 2026
ಚಿತ್ರದುರ್ಗ: ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 16 ರಂದು ನಗರದ ಸ್ಟೇಡಿಯಂ ರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಆವರಣದಲ್ಲಿ ವಿಶೇಷ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಏಕಲವ್ಯ ವಸತಿ ಶಾಲೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ
ಮೇಳದಲ್ಲಿ 8 ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.
18 ರಿಂದ 30 ವರ್ಷದೊಳಗಿನ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಸಂದರ್ಶನ ಜರುಗಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳೊಂದಿಗೆ 5 ಪ್ರತಿ ಬಯೋಡಾಟಾ ತರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆಗಳಾದ 7022459064, 8105619020, 9945587060 ಸಂಪರ್ಕಿಸಬಹುದಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

