
CHITRADURGA NEWS | 16 JUNE 2025
ಚಿತ್ರದುರ್ಗ: ನಗರದ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ ಜೂನ್ 19 ಗುರುವಾರದಂದು ಬೆಳಿಗ್ಗೆ 10 ರಿಂದ 2 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಹಾಗೂ ಮಹಿಳೆ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳುತ್ತಾರೆ.
Also Read: ನಾಳೆಯಿಂದ 14 ದಿನ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ, ಈ ಮಾಹಿತಿ ಓದಿ…
ಆಸಕ್ತ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಯಾವುದೇ ಪದವಿ ಗಳಿಸಿರುವ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, 5 ಬಯೋಡೆಟಾ ಪ್ರತಿ ಹಾಗೂ ಪಾಸ್ ಪೋಟ್ ಸೈಜ್ ಫೋಟೋ ತರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 8105619020, ಅಥವಾ 9945587060 ಗೆ ಕರೆ ಮಾಡಬಹುದು. ಖುದ್ದಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಕಚೇರಿ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
