CHITRADURGA NEWS | 08 JUNE 2026
ಚಿತ್ರದುರ್ಗ: ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಮತ್ತು ಯುವ ಸಮುದಾಯವನ್ನು ನಿಕೋಟಿನ್ ವ್ಯಸನದಿಂದ ರಕ್ಷಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ತಂಬಾಕನ್ನು ನಿಲ್ಲಿಸೋಣ, ತಂಬಾಕು ಮುಕ್ತ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಸಂದೇಶ ನೀಡಿ ಮಾತನಾಡಿದ ಅವರು, ತಂಬಾಕು ಬಳಕೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದನ್ನು ತ್ಯಜಿಸುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಮಾಹಿತಿ ಹಂಚಿಕೊಂಡಿದ್ದಾರೆ.
“ಆಕರ್ಷಣೆಯನ್ನು ಬಹಿರಂಗಪಡಿಸುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ ಎಂದು ತಿಳಿಸಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯ ವರದಿಗಳ ಪ್ರಕಾರ ಜಗತ್ತಿನಲ್ಲಿ ಪ್ರತಿ ವರ್ಷ ಸುಮಾರು 8 ಮಿಲಿಯನ್ ಜನರು ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ.
ಭಾರತದಲ್ಲೇ ವಾರ್ಷಿಕವಾಗಿ 13.5 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಬಲಿಯಾಗುತ್ತಿದ್ದು, ಇವರಲ್ಲಿ ಯುವ ಪೀಳಿಗೆಯ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ.
ಗ್ಲೋಬಲ್ ಅಡಲ್ಟ್ ಟೊಬ್ಯಾಕೊ ಸರ್ವೆ (GATS-2) ಪ್ರಕಾರ, ಕರ್ನಾಟಕದಲ್ಲಿ 15 ವರ್ಷ ಮೇಲ್ಪಟ್ಟ ಯುವಜನತೆ ಗ್ರಾಮೀಣ ಹಾಗೂ ನಗರ ಪ್ರದೇಶಗಳೆರಡರಲ್ಲೂ ಅತಿ ಹೆಚ್ಚು ತಂಬಾಕು ಸೇವನೆಗೆ ದಾಸರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ ಸದಸ್ಯ ನರಸಿಂಹರಾಜು ಆಗ್ರಹ
ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸುವುದರಿಂದ ಧೂಮಪಾನ ನಿಲ್ಲಿಸಿದ 20 ನಿಮಿಷ ಹೃದಯ ಬಡಿತ ಸಾಮಾನ್ಯವಾಗುತ್ತದೆ. ಧೂಮಪಾನ ನಿಲ್ಲಿಸಿದ 12 ಗಂಟೆಗಳಲ್ಲಿ ನಿಮ್ಮ ದೇಹದ ಕಾರ್ಬನ್ ಡೈಯಾಕ್ಸೈಡಿನ ಪ್ರಮಾಣ ಸಾಮಾನ್ಯ ಹಂತಕ್ಕೆ ತಲುಪುತ್ತದೆ.
ಸುಮಾರು 2 ರಿಂದ 12 ವಾರದಲ್ಲಿ ನಿಮ್ಮ ಶ್ವಾಸಕೋಶದ ಕಾರ್ಯ ಉತ್ತಮಗೊಳ್ಳುತ್ತದೆ. 1 ರಿಂದ 9 ತಿಂಗಳುಗಳಲ್ಲಿ ಕೆಮ್ಮು, ಉಸಿರಾಟದ ಸಮಸ್ಯೆ ಕಡಿಮೆಯಾಗುತ್ತದೆ. 5 ರಿಂದ 15 ವರ್ಷಗಳಲ್ಲಿ ಪಾಶ್ರ್ವವಾಯು ಮತ್ತು ಹೃದಯಾಘಾತದ ಅಪಾಯವು ಗಣನೀಯವಾಗಿ ಇಳಿಕೆಯಾಗುತ್ತದೆ. ಹೀಗೆ ಹಲವು ಪ್ರಯೋಜನಗಳು ತಂಬಾಕು ಸೇವನೆ ತ್ಯಜಿಸುವುದರಿಂದ ಸಾಧ್ಯವಿದೆ.
ಇದನ್ನೂ ಓದಿ: ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಮತ್ತು ಸದೃಢ ನಾಗರಿಕರ ಸಮಾಜ ನಿರ್ಮಿಸಲು ಪ್ರತಿಯೊಬ್ಬ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಕ್ರಿಯವಾಗಿ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

