By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: JYOTHI RATHAYATRE | ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » JYOTHI RATHAYATRE | ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ

ಮುಖ್ಯ ಸುದ್ದಿ

JYOTHI RATHAYATRE | ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ

News Desk Chitradurga News
Last updated: 10 July 2024 17:32
News Desk Chitradurga News
12 months ago
Share
ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 JULY 2024

ಚಿತ್ರದುರ್ಗ: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಇದನ್ನೂ ಓದಿ: Mining Company: ಇಷ್ಟು ವರ್ಷದ ಲೆಕ್ಕದ ಜತೆ ಗಣಿ ಕಂಪನಿಯರನ್ನು ಸಭೆಗೆ ಕರೆಸಿ | ಸಂಸದ ಗೋವಿಂದ ಎಂ.ಕಾರಜೋಳ ಖಡಕ್‌ ಸೂಚನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳು, ಗಣ್ಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ಸ್ವಾಗತಿಸಿದರು, ಬಳಿಕ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾದ ಮೆರವಣಿಗೆಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್‍ಬಿಐ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮಾರ್ಗವಾಗಿ ಒನಕೆ ಓಬವ್ವ ವೃತ್ತದವರೆಗೂ ಸಂಭ್ರಮ, ಸಡಗರದಿಂದ ನಡೆಯಿತು.

ಇದನ್ನೂ ಓದಿ: Law College: ದೇಶದ ಅಭಿವೃದ್ಧಿ ಬಗ್ಗೆ ಜನರೇ ತೀರ್ಮಾನಿಸಲಿ | ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹಂಪಿಯಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈಗ ರಥವು ನಮ್ಮ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದು, ಯಾತ್ರೆಗೆ ಜಿಲ್ಲೆಯಲ್ಲಿ ಕನ್ನಡದ ಮನಸುಗಳು ವಿಜೃಂಭಣೆಯಿಂದ ಸ್ವಾಗತ ನೀಡಿವೆ. ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 14ರವರೆಗೂ ಸಂಚರಿಸಲಿದೆ ಎಂದು ಹೇಳಿದರು.

ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ನಗರಸಭೆ ಸಹಯೋಗದಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಇದನ್ನೂ ಓದಿ: Ayyappaswamy; ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ | 12 ವರ್ಷಗಳ ನಂತರ 18 ಮೆಟ್ಟಿಲು ಹತ್ತುವ ಅವಕಾಶ | ಮಹಿಳೆಯರಿಗೂ ಅಪರೂಪದ ಅವಕಾಶ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ತಹಸಿಲ್ದಾರ್ ಡಾ. ನಾಗವೇಣಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga newsJOTHI RATHAYATREKannada NewsKarnatakamagnificentmarchಕನ್ನಡ ನ್ಯೂಸ್ಕರ್ನಾಟಕಚಿತ್ರದುರ್ಗ ನ್ಯೂಸ್ಜ್ಯೋತಿ ರಥಯಾತ್ರೆಭವ್ಯಮೆರವಣಿಗೆ
Share This Article
Facebook Email Print
Previous Article Govinda karajola Mining Company: ಇಷ್ಟು ವರ್ಷದ ಲೆಕ್ಕದ ಜತೆ ಗಣಿ ಕಂಪನಿಯರನ್ನು ಸಭೆಗೆ ಕರೆಸಿ | ಸಂಸದ ಗೋವಿಂದ ಎಂ.ಕಾರಜೋಳ ಖಡಕ್‌ ಸೂಚನೆ
Next Article Senior journalist M.N. Ahobalapathy as member of Media Academy ACADEMY; ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ ನೇಮಕ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up