Connect with us

    Award: ಚಿತ್ರದುರ್ಗದ ಖ್ಯಾತ ಪತ್ರಕರ್ತ ಡಿ.ಉಮಾಪತಿ ಪ್ರಶಸ್ತಿಗೆ ಆಯ್ಕೆ | ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

    ಡಿ.ಉಮಾಪತಿ

    ಮುಖ್ಯ ಸುದ್ದಿ

    Award: ಚಿತ್ರದುರ್ಗದ ಖ್ಯಾತ ಪತ್ರಕರ್ತ ಡಿ.ಉಮಾಪತಿ ಪ್ರಶಸ್ತಿಗೆ ಆಯ್ಕೆ | ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 05 DECEMBER 2024

    ಚಿತ್ರದುರ್ಗ: ಚಿತ್ರದುರ್ಗ ಮೂಲದ ಹಿರಿಯ ಪತ್ರಕರ್ತ ಡಿ.ಉಮಾಪತಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಇದನ್ನೂ ಓದಿ: ದಾವಣಗೆರೆ ವಿವಿ ಅಥ್ಲೆಟಿಕ್ಸ್ | ಹರಿಹರ ಕಾಲೇಜು ಚಾಂಪಿಯನ್

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.

    ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

    ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

    ಡಿ.ಉಮಾಪತಿ ಅವರ ಪರಿಚಯ:

    1959 ಮಾರ್ಚ್ 18 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಅವರು, ಮೈಸೂರು ಮಹಾರಾಜ ಕಾಲೇಜಿನಲ್ಲಿ ಇಂಗ್ಲೀಷ್ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ.

    ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಎರಡನೇ ರ‍್ಯಾಂಕ್ ಪಡೆದ ಹೆಗ್ಗಳಿಕೆ ಇದೆ.

    ಇದನ್ನೂ ಓದಿ: ಟಯರ್ ಬ್ಲಾಸ್ಟ್ | ಪಲ್ಟಿಯಾದ ಕಾರು | ಓರ್ವ ಸ್ಥಳದಲ್ಲೇ ಸಾವು

    ಲೋಕಸಭೆ ವರದಿ, ಚುನಾವಣಾ ವಿಶ್ಲೇಷಣೆ, ಸುಪ್ರೀಂ ಕೋರ್ಟ್ ಪ್ರಕರಣಗಳು, ನದಿ ನೀರು ಹಂಚಿಕೆ ನ್ಯಾಯಾಧೀಕರಣ ವರದಿ, ರಾಷ್ಟçಮಟ್ಟದ ರಾಜಕೀಯ ಬೆಳವಣಿಗೆಗಳು, ವಿದೇಶಾಂಗ ಸಚಿವರ ಜೊತೆ ಪ್ರವಾಸದ ವರದಿಗಾರಿಕೆಯಲ್ಲಿ ಛಾಪು ಮೂಡಿಸಿದವರು.

    ದೆಹಲಿಯಲ್ಲೇ ನೆಲೆಸಿರುವ ಡಿ.ಉಮಾಪತಿ ಅವರು, ವಿಜಯ ಕರ್ನಾಟಕ, ಪ್ರಜಾವಾಣಿ ಸಂಯುಕ್ತ ಕರ್ನಾಟಕ, ವಾರ್ತಾ ಭಾರತಿ ಪತ್ರಿಕೆಗಳಿಗೆ ಅಂಕಣ ಬರೆಯುವುದು, ನ್ಯಾಯಪಥ, ಈದಿನ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

    ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top