ಚಿತ್ರದುರ್ಗ ನ್ಯೂಸ್.ಕಾಂ: ನಗರದ ಖಾಸಗಿ ಬಸ್ ನಿಲ್ದಾಣ, ಸಂತೆ ಹೊಂಡದ ಬಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ನಿರ್ಮಾಣ ಮಾಡಿರುವ ಸಾರ್ವಜನಿಕ ಶೌಚಾಲಯಗಳಿಗೆ ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ವಿಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೌಚಾಲಯಗಳ ಮೂಲ ಸೌಲಭ್ಯಗಳು, ಸ್ವಚ್ಛತೆ, ನೀರಿನ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ನಿರ್ವಹಣೆ ಮಾಡುತ್ತಿರುವವರಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು

ನಗರಸಭೆಯ ಅಧೀನದಲ್ಲಿರುವ ಈ ಶೌಚಾಲಯಗಳು ಸರಿಯಾದ ಸ್ವಚ್ಛತೆ ಇಲ್ಲದೆ ದುರ್ವಾಸನೆ ಬರುತ್ತಿದ್ದವು. ಶುಚಿತ್ವ ಯಾಕೆ ಸರಿಯಾಗಿ ನಡೆಯುತ್ತಿಲ್ಲ ಎಂದು ನ್ಯಾಯಾಧೀಶರು ಅಸಮಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಶೌಚಾಲಯಗಳ ಶುಚಿತ್ವ ಹಾಗೂ ನಿರ್ವಹಣೆ ಕಾಪಾಡುವಲ್ಲಿ ನಗರಸಭೆಯು ವಿಫಲವಾಗಿದೆ. ಇವುಗಳ ಜವಾಬ್ದಾರಿಯಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಾಳೆ, ಅಡಿಕೆ, ಕತ್ತಾಳೆ ನಾರುಗಳ ಮೌಲ್ಯವರ್ಧನೆ ಕಾರ್ಯಾಗಾರ
ನಗರದ ಸಾರ್ವಜನಿಕ ಶೌಚಾಲಯಗಳ ದುಸ್ಥಿತಿಯ ಬಗ್ಗೆ ಸ್ವತಃ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಎಂ.ವಿಜಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
