ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರ ಭೇಟಿ | ಸ್ವಚ್ಛತೆ ಕಾಪಾಡಲು ಸೂಚನೆ

CHITRADURGA NEWS | 31 MAY 2024
ಚಿತ್ರದುರ್ಗ: ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಅವರಿಗೆ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆಗಳ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳನ್ನು ಪರಿಶೀಲನೆ ಮಾಡಿ, ಸ್ವಚ್ಛತೆ ಕಾಪಾಡಲು ಸೂಚಿಸಿದರು.
ಇದನ್ನೂ ಓದಿ: ಶಿಕ್ಷಕರ ಧ್ವನಿಯಾದ ನಾರಾಯಣಸ್ವಾಮಿ | ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

ಆಸ್ಪತ್ರೆಯ ಒಪಿಡಿ ವಿಭಾಗ, ಸಿ.ಟಿ. ಸ್ಕ್ಯಾನ್ ಮಕ್ಕಳ ವಾರ್ಡ್, ಸಾಮಾನ್ಯ ವಾರ್ಡ್ಗಳು, ರಕ್ತನಿಧಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ವೈದ್ಯರು, ರೋಗಿಗಳು, ಸಾರ್ವಜನಿಕರ ಬಳಿ ಮಾಹಿತಿ ಸಂಗ್ರಹಿಸಿದರು. ಕೆಲ ರೋಗಿಗಳು ಹೊರಗಿನಿಂದ ಔಷಧಿ, ಸಿ.ಟಿ.ಸ್ಕ್ಯಾನ್ ಮಾಡಿಸಲು ಹೊರಗೆ ಕಳಿಸುವತ್ತಿರುವ ಬಗ್ಗೆ ನ್ಯಾಯಾಧೀಶರ ಗಮನಕ್ಕೆ ತಂದರು.
ಇದನ್ನೂ ಓದಿ: ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಶ್ರೀನಿವಾಸ್ ಸಮರ್ಥರು | ಡಾ.ಪ್ರಭಾ ಮಲ್ಲಿಕಾರ್ಜುನ್
ಈ ವೇಳೆ ನಿವಾಸಿ ವೈದ್ಯಾಧಿಕಾರಿ ಡಾ.ಆನಂದಪ್ರಕಾಶ್ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಔಷಧಿಯನ್ನು ಹೊರಗೆ ತರಲು ಬರೆದುಕೊಟ್ಟರೂ, ಆನಂತರ ಅದನ್ನು ಕ್ಲೈಮ್ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ಆಸ್ಪತ್ರೆಯ ಶೌಚಾಲಯಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಸ್ವಚ್ಛತೆ ಇಲ್ಲದ ಬಗ್ಗೆ ವೈದ್ಯರ ಗಮನಕ್ಕೆ ತಂದು ಆಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ: ಪತ್ರಿಕೆ ವಿತರಕರ ನಡಿಗೆ ಕೋಟೆ ನಗರಿ ಕಡೆಗೆ | ಸೆಪ್ಟೆಂಬರ್ 8 ರಂದು ರಾಜ್ಯ ಸಮ್ಮೇಳನ
ಜಿಲ್ಲಾ ಶಸ್ತ್ರಚಿಕಿತ್ಸಕರ ಬಳಿ ಸಿ.ಟಿ.ಸ್ಕ್ಯಾನ್ ಸೇರಿದಂತೆ ಇನ್ನಿತರೆ ಮಾಹಿತಿ ಪಡೆದುಕೊಂಡು ಎಲ್ಲವನ್ನೂ ಕ್ರೂಢಿಕರಿಸಿ ನ್ಯಾಯಾಂಗ ವಿಭಾಗದ ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ನ್ಯಾಯಾಧೀಶರು ಸುದ್ದಿಗಾರರಿಗೆ ತಿಳಿಸಿದರು.
