CHITRADURGA NEWS | 18 JULY 2026
ಚಿತ್ರದುರ್ಗ: ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆಯಲಾಗುವ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಈ ಯೋಜನೆ ಅನ್ವಯಿಸಲಿದೆ.
ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
ವಿಮಾ ನೊಂದಣಿಗೆ ರಿಲಯನ್ಸ್ ಇನ್ಸೂರೆನ್ಸ್ ಕಂಪನಿಯನ್ನು ಅಧಿಕೃತ ವಿಮಾ ಸಂಸ್ಥೆಯಾಗಿ ನಿಗದಿಪಡಿಸಲಾಗಿದೆ. ವಿಮೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಈ ಯೋಜನೆಯಡಿ ಬೆಳೆ ವಿಮಾ ನಷ್ಟವನ್ನು ವೈಜ್ಞಾನಿಕವಾಗಿ ಹವಾಮಾನ ಅಂಶಗಳ ಆಧಾರದ ಮೇಲೆ ತೀರ್ಮಾನಿಸಲಾಗುತ್ತದೆ. ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗುವ ಮಳೆಯ ಪ್ರಮಾಣ, ಮಳೆಯ ಹಂಚಿಕೆ, ತಾಪಮಾನ, ಗಾಳಿಯ ವೇಗ ಹಾಗೂ ಆದ್ರ್ರತೆ ಮುಂತಾದ ಪ್ರಕೃತಿ ದತ್ತ ಅಂಶಗಳನ್ನು ಪರಿಗಣಿಸಿ ರೈತರ ಬೆಳೆ ನಷ್ಟದ ಪರಿಹಾರವನ್ನು ನಿರ್ಧರಿಸಲಾಗುತ್ತದೆ.
ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ಗರಿಷ್ಠ 1,28,000 ರೂಪಾಯಿ ವಿಮಾ ಮೊತ್ತ ನಿಗದಿಯಾಗಿದ್ದು, ರೈತರು ಶೇಕಡಾ 5 ರಷ್ಟು ಅಂದರೆ 6,400 ರೂಪಾಯಿ ವಿಮಾ ಕಂತು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ
ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ 1,27,000 ರೂಪಾಯಿ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ 6,350 ರೂಪಾಯಿಗಳಾಗಿವೆ. ಇನ್ನು ಮಾವು ಬೆಳೆಗೆ ಪ್ರತಿ ಹೆಕ್ಟೇರ್‍ಗೆ 80,000 ರೂಪಾಯಿ ವಿಮಾ ಮೊತ್ತ ನಿಗದಿಯಾಗಿದ್ದು, ರೈತರು 4,000 ರೂಪಾಯಿಗಳ ವಿಮಾ ಕಂತನ್ನು ಪಾವತಿಸಬೇಕಾಗುತ್ತದೆ.
ವಿಮಾ ಯೋಜನೆಗೆ ಒಳಪಡುವ ತೋಟಗಾರಿಕೆ ಬೆಳೆಗಳು ಕಡ್ಡಾಯವಾಗಿ ಫಸಲು ನೀಡುವ ಹಂತದಲ್ಲಿರಬೇಕು. ವಿವಿಧ ಬ್ಯಾಂಕುಗಳಿಂದ ಕೃಷಿ ಸಾಲ ಪಡೆದಿರುವ ಹಾಗೂ ಸಾಲ ಪಡೆಯದ ಉಭಯ ರೈತರು ಸಹ ಈ ಯೋಜನೆಗೆ ಒಳಪಡಲು ಅರ್ಹರಾಗಿರುತ್ತಾರೆ.
ರೈತರು ನೊಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ ಅಥವಾ ಋತುಗಳ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕು. ಒಂದು ವೇಳೆ ಬೆಳೆ ಸಮೀಕ್ಷೆಯಲ್ಲಿ ಸದರಿ ಬೆಳೆ ಕಂಡುಬರದಿದ್ದರೆ ಅಂತಹ ರೈತರಿಗೆ ನೊಂದಣಿಗೆ ಅನುಮತಿ ಇರುವುದಿಲ್ಲ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಅರ್ಹ ರೈತರು ಪ್ರಸ್ತುತ ಸಾಲಿನ ಪಹಣಿ, ಎಫ್.ಐ.ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ ಎನ್‍ಪಿಸಿಐ ಸಕ್ರಿಯವಾಗಿರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ತಮ್ಮ ಹತ್ತಿರದ ಗ್ರಾಮ-1 ಕೇಂದ್ರ, ಸಿ.ಎಸ್.ಸಿ ಕೇಂದ್ರ ಅಥವಾ ಬ್ಯಾಂಕುಗಳಿಗೆ ಭೇಟಿ ನೀಡಿ ವಿಮಾ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರ ಅಥವಾ ತಾಂತ್ರಿಕ ಮಾಹಿತಿ ಅಗತ್ಯವಿದ್ದಲ್ಲಿ ರೈತರು ತಮ್ಮ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ ಅಥವಾ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕ್ ಸಂಪರ್ಕಿಸಲು ತಿಳಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

