
CHITRADURGA NEWS | 19 JUNE 2025
ಚಿತ್ರದುರ್ಗ: ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಮತ್ತು ಎಸ್.ರಾಜಶೇಖರ್ ಅವರು ಇದೇ ಜೂನ್ 21ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ 2005 ಪರಿಣಾಮಾಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಂವಾದ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
Also Read: ಡಿಸೆಂಬರ್ 31ಕ್ಕೆ ಹೊಸ ರೈಲು ನಿಲ್ದಾಣ ಉದ್ಘಾಟನೆಗೆ ಗಡುವು | ಗೋವಿಂದ ಕಾರಜೋಳ
ಮಾಹಿತಿ ಹಕ್ಕು ಕಾಯ್ದೆ ಮಹತ್ವದ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜೂನ್ 21ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು.
ಮಧ್ಯಾಹ್ನ 2 ರಿಂದ 3 ರವರೆಗೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸುವ ಕಾರ್ಯಕ್ರಮವಿದೆ ಎಂದು ಕರ್ನಾಟಕ ಮಾಹಿತಿ ಆಯೋಗ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
