CHITRADURGA NEWS | 09 JUNE 2026
ಚಿತ್ರದುರ್ಗ: ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್-2026ರ ಎರಡು ಮಾಹೆಗಳ ಆಹಾರಧಾನ್ಯವನ್ನು ಜೂನ್-2026ರ ಮಾಹೆಯಲ್ಲಿ ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಬಯೋಮೆಟ್ರಿಕ್ (ಬೆರಳುಚ್ಚು) ನೀಡಿ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ ಸದಸ್ಯ ನರಸಿಂಹರಾಜು ಆಗ್ರಹ
ಮೇ-2026 ಮತ್ತು ಜೂನ್-2026ರ ಎರಡು ಮಾಹೆಗಳ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ 04 ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ, 05 ಸದಸ್ಯರಿಗೆ 30 ಕೆ.ಜಿ, 06 ಸದಸ್ಯರಿಗೆ 50 ಕೆ.ಜಿ, 07 ಸದಸ್ಯರಿಗೆ 70 ಕೆ.ಜಿ., 08 ಸದಸ್ಯರಿಗೆ 90 ಕೆ.ಜಿ , 09 ಸದಸ್ಯರಿಗೆ 110 ಕೆ.ಜಿ, 10 ಸದಸ್ಯರಿಗೆ 130 ಕೆ.ಜಿ ಅಕ್ಕಿ ಉಚಿತ ಪಡೆದುಕೊಳ್ಳಬೇಕು. 10 ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ.
01 ರಿಂದ 03 ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಈಗಾಗಲೇ ಎನ್.ಎಫ್.ಎಸ್.ಎ ಯೋಜನೆಯಡಿ ಮೇ-2026ರಲ್ಲಿ 35 ಕೆ.ಜಿ ಮತ್ತು ಜೂನ್-2026ರಲ್ಲಿ 35 ಕೆ.ಜಿ ಸೇರಿ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ರಾಗಿ ಆಹಾರಧಾನ್ಯಗಳನ್ನು ಮೇ-2026ರ ಮಾಹೆಯಲ್ಲೇ ವಿತರಣೆ ಮಾಡಲಾಗಿರುತ್ತದೆ. ಆದ್ದರಿಂದ ಇವರಿಗೆ ಜೂನ್-2026ರ ಮಾಹೆಯಲ್ಲಿ ಹಂಚಿಕೆ ಇರುವುದಿಲ್ಲ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
ಕೇಂದ್ರ ಮತ್ತು ರಾಜ್ಯ ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ದೊರೆಯಲಿದೆ. ಯಾವುದೇ ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ಅಥವಾ ಮಾಲೀಕರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದಲ್ಲಿ ಅಥವಾ ಹಣ ಕೇಳಿದಲ್ಲಿ ರಾಜ್ಯ ಸಹಾಯವಾಣಿ ಸಂಖ್ಯೆ 1967 ಹಾಗೂ ಜಂಟಿ ನಿರ್ದೇಶಕರ ಕಚೇರಿ ಅಥವಾ ತಹಶೀಲ್ದಾರ್ ಕಚೇರಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಆಹಾರ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

