ಮುಖ್ಯ ಸುದ್ದಿ
ನಾರಾಯಣಸ್ವಾಮಿ ಪರವಾಗಿ ಕೆ.ಎಸ್.ನವೀನ್ ಮತಯಾಚನೆ

CHITRADURGA NEWS | 16 MAY 2024
ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ಕಾರಜೋಳ ಸೇರಿದಂತೆ ಬಿಜೆಪಿ ಮುಖಂಡರು ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರವಾಗಿ ಮತಯಾಚನೆ ಮಾಡಿದರು.
ಮತಯಾಚನೆ ವೇಳೆ ಎಂಎಲ್ಸಿ ಕೆ.ಎಸ್.ನವೀನ್ ಮಾತನಾಡುತ್ತಾ, ಕೇಂದ್ರ ಸರ್ಕಾರ ದೇಶದಲ್ಲಿ ಹೊಸ ಶಿಕ್ಷಣ ನೀತಿ (ಎನ್.ಇ.ಪಿ) ಜಾರಿ ಮಾಡಲು ಹೊರಟಿದೆ. ಇದರಿಂದ ಈಗ ಅಲ್ಲದಿದ್ದರೂ, ಮುಂದಿನ ಪೀಳಿಗೆಗೆ ಇದರ ಪ್ರಯೋಜನವಾಗಲಿದೆ. ಆದರೆ, ರಾಜ್ಯ ಸರ್ಕಾರ ಇದನ್ನು ವಿರೋಧಿಸಿ, ಎಸ್‍ಇಪಿ ಜಾರಿ ಮಾಡಲು ಮುಂದಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: INDIAN INTERNATIONAL ಶಾಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ | ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಎಸ್‍ಇಪಿ ನಿಯಮ ರೂಪಿಸಲು 15 ಜನರ ಸಮಿತಿ ರಚನೆ ಮಾಡಿದೆ. ಇದರಲ್ಲಿ ಮೂರು ಜನ ಮಾತ್ರ ಕರ್ನಾಟಕದವರು. ಉಳಿದ 12 ಜನ ಬೇರೆ ರಾಜ್ಯದವರು. ಕರ್ನಾಟಕ ಸರ್ಕಾರ ರೂಪಿಸಲು ಮುಂದಾಗಿರುವ ರಾಜ್ಯ ಶಿಕ್ಷಣ ನೀತಿ ಸಮಿತಿಯ ಅಧ್ಯಕ್ಷರು ದೆಹಲಿಯವರಾಗಿರುವುದು ವಿಪರ್ಯಾಸ ಎಂದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಕಾನೂನು ಮಾಡಿ ಪರಿಷತ್‍ಗೆ ಕಳುಹಿಸಲಿದೆ. ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಗಿದ್ದರೆ ಅದನ್ನು ಪಾಸು ಮಾಡದೆ ತಡೆಯಬಹುದು. ಈ ನಿಟ್ಟಿನಲ್ಲಿ ಪರಿಷತ್ತಿನಲ್ಲಿ ಸಂಖ್ಯಾ ಬಲ ಹೆಚ್ಚಾಗಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದೆ | ವೈ.ಎ.ನಾರಾಯಣಸ್ವಾಮಿ
ವೈ.ಎ.ನಾರಾಯಣಸ್ವಾಮಿ ಮೂರು ಅವಧಿಗೆ ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅನುಭವಿ. ಎಲ್ಲರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಈ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ವೈ.ಎ.ನಾರಾಯಣಸ್ವಾಮಿ ಅವರಿಗೆ ಮತ ಹಾಕುವಂತೆ ಕೆ.ಎಸ್.ನವೀನ್ ಮನವಿ ಮಾಡಿದರು.
ಬಿಜೆಪಿ ಕಾರ್ಯಕರ್ತರಾದ ಶೈಲಜಾ ರೆಡ್ಡಿ, ಶ್ಯಾಮಲಾ ಶಿವಪ್ರಕಾಶ್, ಶಿವಪ್ರಕಾಶ್ ದಗ್ಗೆ, ನಾಗರಾಜ್ ಬೇದ್ರೆ ಮತ್ತಿತರರಿದ್ದರು.
