
CHITRADURGA NEWS | 22 NOVEMBER 2025
ಚಿತ್ರದುರ್ಗ: ಇಲ್ಲಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವದೇಶಿ ಮೇಳದ ಪ್ರಯುಕ್ತ ನಡೆದ ಪುರುಷರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.
ಚಿತ್ರದುರ್ಗದ ರಾಯಬಾರಿ ತಂಡ ದ್ವಿತೀಯ, ನಾಯಕನಹಟ್ಟಿ ತೃತೀಯ, ನಾಲ್ಕನೆ ಸ್ಥಾನವನ್ನು ಬೊಮ್ಮೆನಹಳ್ಳಿ ಪಡೆದಿದೆ.
ಇದನ್ನೂ ಓದಿ: RTO ಕಚೇರಿ ಪ್ರಕರಣಗಳಲ್ಲಿ ಶೇ.50 ರಿಯಾಯಿತಿ | ಡಿಸೆಂಬರ್ 12 ಕೊನೆಯ ದಿನ
ರಾಯಬಾರಿಯ ರಂಗ ಉತ್ತಮ ದಾಳಿಕೋರನಾಗಿ, ಉತ್ತಮ ಹಿಡಿತಗಾರನಾಗಿ ನಾಯಕನಹಟ್ಟಿ ಮರೇಶ್ ಮತ್ತು ಸರ್ವೋತ್ತಮ ಆಟಗಾರನಾಗಿ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರವೀಣ್ ಹೊರಹೊಮ್ಮಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಸಿಬ್ಬಂದಿ ವರ್ಗದವರು ಉತ್ತಮ ಆಟ ಪ್ರದರ್ಶಿಸಿದ ಕಬಡ್ಡಿ ಪಟುಗಳಿಗೆ ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
