
CHITRADURGA NEWS | 02 AUGUST 2025
ಚಿತ್ರದುರ್ಗ: ಸಾಹಿತಿ, ಪತ್ರಕರ್ತ ಜಡೆಕುಂಟೆ ಮಂಜುನಾಥ್ ಅವರ ʼಕಾಡು ಕಾಯುವ ಮರʼ ಕಥಾ ಸಂಕಲನ ಲೋಕಾರ್ಪಣೆ ಸಮಾರಂಭ ಆ.3 ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ | ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ಡಿಸಿ ವೆಂಕಟೇಶ್

ಕಾರ್ಯನಿರತ ಪತ್ರಕರ್ತರ ಸಂಘ, ಲಂಕೇಶ್ ವಿಚಾರ ವೇದಿಕೆ, ಅಂಬೇಡ್ಕರ್ ವಿಚಾರ ವೇದಿಕೆ, ಮೈತ್ರಿ ಪುಸ್ತಕ ಮನೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಿರಿಯ ಪತ್ರಕರ್ತರು, ಲೇಖಕರಾದ ಜಿ.ಎನ್.ಮೋಹನ್ ಕೃತಿ ಲೋಕಾರ್ಪಣೆ ಮಾಡಲಿದ್ದು, ಕಾರ್ಯಕ್ರಮವನ್ನು ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಉದ್ಘಾಟಿಸಲಿದ್ದಾರೆ.
ಕೃತಿ ಕುರಿತು ಶಿವಮೊಗ್ಗದ ಉಪನ್ಯಾಸಕಿ ಭಾರತೀದೇವಿ ಮಾತನಾಡಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸುವರು.
ಇದನ್ನೂ ಓದಿ: ಒಳ ಮೀಸಲಾತಿ ಜಾರಿಗಾಗಿ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಬೃಹತ್ ಪ್ರತಿಭಟನೆ | ಡಿಸಿ ಕಚೇರಿ ಮುತ್ತಿಗೆ
ವಿಶೇಷ ಆಹ್ವಾನಿತರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಅಂತಾರಾಷ್ಟ್ರೀಯ ವ್ಯಂಗ್ಯ ಚಿತ್ರಕಾರ ಬಿ.ಜಿ.ಗುಜ್ಜಾರ್, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಲಪತಿ, ಕೂಡ್ಲಿಗಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕ ಆರ್.ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
