ಮುಖ್ಯ ಸುದ್ದಿ
loan facility; ಕಾಡುಗೊಲ್ಲ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
CHITRADURGA NEWS | 11 AUGUST 2024
ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಕಾಡುಗೊಲ್ಲ ಜನಾಂಗದ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ(loan facility)ಕ್ಕೆ ಆನ್‌ಲೈನ್ ಮೂಲಕ ಸೇವಾಸಿಂಧು ಫೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Chitradurga fort: ಕೋಟೆಯ ಒನಕೆ ಓಬವ್ವನ ಕಿಂಡಿಯಲ್ಲಿ ಕುಸಿದು ಬಿದ್ದ ವ್ಯಕ್ತಿ | ಸಕಾಲಕ್ಕೆ ಹೊತ್ತು ತಂದು ಆಸ್ಪತ್ರೆ ಸೇರಿಸಿ ರಕ್ಷಿಸಿದ ಪ್ರವಾಸಿ ಮಿತ್ರರು
ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ವಾರ್ಷಿಕ ವರಮಾನ ರೂ.8 ಲಕ್ಷ ಮಿತಿಯೊಳಗಿರಬೇಕು).
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. 18-55 ವರ್ಷಗಳ ವಯೋಮಿತಿ ಹೊಂದಿರಬೇಕು. ನಿಗಮ / ಸರ್ಕಾರದ ಯಾವುದಾದರೂ ಯೋಜನೆಗಳಡಿಯಲ್ಲಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ 18-30 ವರ್ಷ ವಯೋಮಿತಿಯೊಂದಿಗೆ, ವಾರ್ಷಿಕ ವರಮಾನ 3.50ಲಕ್ಷ ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರನು 21 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿದಾರನ ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
ಕ್ಲಿಕ್ ಮಾಡಿ ಓದಿ: Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದಲ್ಲಿ ರೂ.98,000/ ಮತ್ತು ನಗರ ಪ್ರದೇಶದವರಿಗೆ ರೂ.1,20,000/ ಮೀರಿರಬಾರದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ನಷ್ಟು ಮೀಸಲಾತಿ ಹೊಂದಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848, 7899899039 ಹಾಗೂ ಜಿಲ್ಲೆಗಳಲ್ಲಿ ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್. ಶಿಲ್ಪಾ ತಿಳಿಸಿದ್ದಾರೆ.