ಮುಖ್ಯ ಸುದ್ದಿ
ಒಂಭತ್ತನೇ ಸುತ್ತಿನಲ್ಲೂ ಕಮಲ ನಾಗಲೋಟ | ಹೆಚ್ಚುತ್ತಿದೆ ಗೆಲುವಿನ ಅಂತರ

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸರ್ಕಾರಿ ವಿಜ್ಞಾನ ಕಾಲೇಜು ಆವರಣದ ಕೇಂದ್ರದಲ್ಲಿ ನಡೆಯುತ್ತಿರುವ ಮತ ಎಣಿಕೆಯ ಒಂಭತ್ತನೇ ಸುತ್ತಿನಲ್ಲೂ ಬಿಜೆಪಿ ತೀವ್ರ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 3,20,669 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2,84,216ಮತ ಪಡೆದಿದ್ದಾರೆ. 36,453ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡು, ಮೂರು, ನಾಲ್ಕು, ಐದು, ಆರು, ಏಳು, ಎಂಟು ಮತ್ತು ಒಂಭತ್ತನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. 36,453 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದ್ದು, ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.
