CHITRADURGA NEWS | 17 OCTOBER 2025
ಚಿತ್ರದುರ್ಗ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಬೀರೂರು ಗ್ರಾಮದ ಬಸವ ಪರಂಪರೆಯ ವಿರಕ್ತಮಠದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಲಿಪುರ ಸಮೀಪದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರಸ್ವಾಮಿ ಕರ್ನಾಟಕದ ಲಿಂಗಾಯಿತ ಮಠಾಧೀಶರ ಒಕ್ಕೂಟದ ಪೂಜ್ಯರ ಕುರಿತು ಮಾನಹಾನಿಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಜಾಗತಿಕ ಲಿಂಗಾಯತ ಮಹಾಸಭಾದಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ – ತುಮಕೂರು ರೈಲು ಮಾರ್ಗ | ಹಳಿ ಪರಿಶೀಲಿಸಿದ ಸಚಿವ ಸೋಮಣ್ಣ | ಒಂದು ವರ್ಷದಲ್ಲಿ ಚಾಲನೆ
ಕನೇರಿಸ್ವಾಮಿ ಲಿಂಗಾಯಿತ ಮಠಾಧೀಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಾಂವಿಧಾನಿಕ ಪದಗಳನ್ನು ಬಳಸಿರುವುದು ಸರಿಯಲ್ಲ. ಪ್ರತಿಷ್ಟಿತ ಒಕ್ಕೂಟದ ಮಠಾಧೀಶರನ್ನು ಹೆದರಿಸುವ ಕೀಳು ವ್ಯಕ್ತಿತ್ವವನ್ನು ಪ್ರದರ್ಶಿಸಿದ್ದಾರೆ.
ಇಂತಹ ಹೇಳಿಕೆಗಳು ಧಾರ್ಮಿಕ ಸಹಿಷ್ಣುತೆಗೆ ಹಾಗೂ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುತ್ತದೆ. ಹಾಗಾಗಿ ಕೂಡಲೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಭೋವಿ ನಿಗಮದ ಅಧ್ಯಕ್ಷರ ಪದಗ್ರಹಣ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭಾಗೀ
ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಡಿ.ಕೆಂಚವೀರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಟಿ.ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾಬಾಬು, ಪಾರ್ವತಮ್ಮ, ಪ್ರಧಾನ ಕಾರ್ಯದರ್ಶಿ ಎಂ.ರಂಗನಾಥ್, ಬಸವರಾಜ್‍ಕಟ್ಟಿ, ಮಂಜು, ಚಂದ್ರಶೇಖರ್, ನಾಗರಾಜು, ವಾಗೀಶ್‍ಬಾಬು, ಕೆ.ಇ.ಬಿ.ಷಣ್ಮುಖಪ್ಪ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
