
CHITRADURGA NEWS | 14 DECEMBER 2025
ಚಿತ್ರದುರ್ಗ: ನಗರದ ಹೊರವಲಯದ ಕಣಿವೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 29ನೇ ವರ್ಷದ ಕಾರ್ತಿಕ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಮಾವ ಕೆ.ಟಿ.ತಿಪ್ಪೇಸ್ವಾಮಿ ನಿಧನ
ದೇವಸ್ಥಾನದಲ್ಲಿನ ಶ್ರೀ ಆಂಜನೇಯಸ್ವಾಮಿಗೆ ಕಾರ್ತಿಕ ಮಹೋತ್ಸವದ ಅಂಗವಾಗಿ ಬೆಳ್ಳಿ ಆಭರಣ ತೊಡಿಸಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಪಕ್ಕದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೂ ವಿಶೇಷ ಅಲಂಕಾರ, ಪೂಜೆ ನಡೆಯಿತು.
ಆಂಜನೇಯಸ್ವಾಮಿಗೆ ವಿವಿಧ ಪುಷ್ಪ, ಹಣ್ಣು, ವೀಳ್ಯದೆಲೆ, ಆಕರ್ಷಕ ವಸ್ತು, ಹೂವಿನ ಹಾರಗಳಿಂದ ಭಕ್ತರ ಕಣ್ಮನ ಸೆಳೆಯುವಂತೆ ಅರ್ಚಕರು ಅಲಂಕರಿಸಿದ್ದರು.
ಸಾವಿರಾರು ಭಕ್ತರು ಬೆಳಗ್ಗೆ 9 ರಿಂದ ರಾತ್ರಿ 9ರವರೆಗೂ ಸರದಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು, ಕುಟುಂಬ ಮತ್ತು ಊರಿನ ಒಳಿತಿಗಾಗಿ ಪ್ರಾರ್ಥಿಸಿದರು.
ಇದನ್ನೂ ಓದಿ: ಕೇಂದ್ರದ ನೀತಿ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ
ಪಕ್ಕದ ರಾಮ ಮಂದಿರದಲ್ಲಿ ಸೀತಾ ರಾಮರ ಪಲ್ಲಕ್ಕಿ ಮಾರ್ಗದುದ್ದಕ್ಕೂ ಸಾವಿರಾರು ದೀಪಗಳನ್ನು ಹಚ್ಚುವ ಮೂಲಕ ಭಕ್ತಿ ಸಮರ್ಪಿಸಿದರು. ನೆರೆದಿದ್ದವರು ಮಹಾ ಮಂಗಳಾರತಿ ಪಡೆದು, ತೀರ್ಥ ಸ್ವೀಕರಿಸಿದರು. ಭಾಗವಹಿಸಿದ್ದ ಎಲ್ಲ ಭಕ್ತರಿಗೂ ಅನ್ನಸಂತರ್ಪಣೆ ಮಾಡಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
