
CHITRADURGA NEWS | 12 SEPTEMBER 2025
ಚಿತ್ರದುರ್ಗ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಡಿ, ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಅಧಿಕಾರೇತರ ಸದಸ್ಯರ ಕನ್ನಡ ಜಾಗೃತಿ ಸಮಿತಿ ರಚಿಸಿದೆ.
ಇದನ್ನೂ ಓದಿ: ನಗರಸಭೆ ನೂತನ ಅಧ್ಯಕ್ಷರಾಗಿ ಅನಿತಾ ರಮೇಶ್ ಆಯ್ಕೆ
ಚಿತ್ರದುರ್ಗ ಜಿಲ್ಲಾ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್, ಚಳ್ಳಕೆರೆ ಎಚ್‌ಪಿಪಿಸಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕೆ.ಚಿತ್ತಯ್ಯ, ಮೊಳಕಾಲ್ಮೂರು ತಾಲೂಕು ರಾಂಪುರದ ಡಾ.ಎಂ.ವೇದಾಂತ್, ಹೊಳಲ್ಕೆರೆಯ ಶಶಿಕುಮಾರ್ ಬಾಲು ನೇಮಕವಾಗಿದ್ದಾರೆ.
ಇದನ್ನೂ ಓದಿ: ಎತ್ತಿನ ಗಾಡಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬಸ್ | ಅಪಾಯದಿಂದ ಪಾರಾದ ಪ್ರಯಾಣಿಕರು
ರಾಜ್ಯದ 31 ಜಿಲ್ಲೆಗಳಿಗೆ ತಲಾ 5 ಸದಸ್ಯರಂತೆ 155 ಸದಸ್ಯರು, 11 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಲಾ 6 ರಂತೆ 66 ಸದಸ್ಯರು ಹಾಗೂ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸದಸ್ಯರು ಸೇರಿದಂತೆ ರಾಜ್ಯದಾದ್ಯಂತ 249 ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
