CHITRADURGA NEWS | 10 NOVEMBER 2025
ಚಿತ್ರದುರ್ಗ: ಕನ್ನಡ ರಾಜ್ಯೋತ್ಸವ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.
ಇದನ್ನೂ ಓದಿ: ಹೊಳಲ್ಕೆರೆ ತಾಲ್ಲೂಕಿನಲ್ಲಿ ಉಚಿತ ಕಾಲುಬಾಯಿ ಜ್ವರದ ಲಸಿಕೆ ಅಭಿಯಾನ
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚು ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
