ಮುಖ್ಯ ಸುದ್ದಿ
ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ
CHITRADURGA NEWS | 23 APRIL 2025
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಕನ್ನಡ ಕರಡು ತಿದ್ದುವ ಕಾರ್ಯಾಗಾರವನ್ನು ಇದೇ ಏ.25 ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಶ್ರೀ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
Also Read: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಇತಿಹಾಸ ಸಂಶೋಧಕ ಡಾ. ಬಿ.ರಾಜಶೇಖರಪ್ಪ ಉದ್ಘಾಟನೆ ನೆರವೇರಿಸುವರು.
ಸಾಹಿತಿ ಕೆ.ರಾಜಕುಮಾರ್ ಅವರು ಕಮ್ಮಟದ ನಿರ್ದೇಶಕರಾಗಿ ಭಾಗವಹಿಸುವರು.
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಎಚ್.ವಿ.ವಾಮದೇವಪ್ಪ, ಸಂಸ್ಥೆಯ ವಿಶೇಷಾಧಿಕಾರಿ ವೀರಣ್ಣ ಬಿ.ಜತ್ತಿ ಉಪಸ್ಥಿತರಿರುವರು.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಾ.ಯಣ್ಣೆಕಟ್ಟೆ ಚಿಕ್ಕಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.