
CHITRADURGA NEWS | 30 NOVEMBER 2025
ಚಿತ್ರದುರ್ಗ: ಕನ್ನಡ ನಾಡು, ನುಡಿಯ ಸಾಹಿತ್ಯ ಅಧ್ಯಯನ ಮಾಡಿದರೆ ಕನ್ನಡದ ಶ್ರೇಷ್ಠತೆ ಅರ್ಥವಾಗುತ್ತದೆ. ಕನ್ನಡವೂ ಕಲೆ, ಸಾಹಿತ್ಯದಿಂದ ಸಂಪತ್ ಭರಿತವಾಗಿದೆ ಎಂದು ರಾಜ್ಯ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಕೆ.ಎಂ.ವೀರೇಶ್ ಹೇಳಿದರು.
ಇದನ್ನೂ ಓದಿ: BJP ರೈತ ಮೋರ್ಚಾದಿಂದ ನಾಳೆ ಪ್ರತಿಭಟನೆ

ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇವಸ್ಥಾನದ ಆವರಣದಲ್ಲಿ 22ನೇ ವಾರ್ಡ್ ಪ್ರೇಮಾಭಿವೃದ್ಧಿ ಸಂಘ, ಗಣಪತಿ ದೇವಸ್ಥಾನ ಸಮಿತಿ, ಗಮಕ ಕಲಾಭಿಮಾನಿಗಳ ಸಂಘ, ಮಾರುತಿ ಭಜನಾ ಮಂಡಳಿ, ಸ್ಮರಾತ್ಮಿಕ ಮತ್ತು ಶಾರದ ಸಂಗೀತ ಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕತೆಯ ಬಿಡು ಕೂಡ ನಮ್ಮ ಕನ್ನಡ ನಾಡು. ಕರ್ನಾಟಕ ಕಟ್ಟಲು ಹಲವಾರು ಗಣ್ಯರು ಏಕೀಕರಣಕ್ಕೆ ದುಡಿದು ಶ್ರಮಿಸಿದ್ದಾರೆ. ಇಂತಹ ಚೆಲುವ ಕನ್ನಡ ನಾಡನ್ನು ಕಟ್ಟಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.
ಗಮಕಲಾಭಿಮಾನಿಗಳ ಸಂಘದ ಅಧ್ಯಕ್ಷರಾದ ರಮಾದೇವಿ ಮಾತನಾಡಿ, ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಪರಂಪರೆಯನ್ನುಉಳಿಸುವುದು, ಬೆಳೆಸುವುದು ಮುಂದಿನ ಯುವ ಪೀಳಿಗೆಯ ಜವಾಬ್ದಾರಿ ಎಂದು ತಿಳಿಸಿದರು.
ಗಣಪತಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದಪ್ಪ, ನಗರಸಭೆ ಮಾಜಿ ಅಧ್ಯಕ್ಷರಾದ ಅನಿತಾ ರಮೇಶ್, ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಕೃಷ್ಣಮೂರ್ತಿ, ಸಂಘದ ಅಧ್ಯಕ್ಷ ಮುರುಗೇಶ್ ಗೌಡ್ರು ಮಾತನಾಡಿದರು.
ಇದನ್ನೂ ಓದಿ: ಕಾಂಗ್ರೆಸ್ಸಿಗೆ ವಯಸ್ಸಾಗಿದೆ, ಚಿಕಿತ್ಸೆ ಕೊಟ್ಟರೂ ಉಳಿಯದು | ಛಲವಾದಿ ನಾರಾಯಣಸ್ವಾಮಿ
ಈ ಸಂದರ್ಭದಲ್ಲಿ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸುರೇಶ್ ಬಾಬು ರವರು ಜಿಲ್ಲಾ ಕನ್ನಡ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನಿಸಿ, ಗೌರವಿಸಲಾಯಿತು.
ಸ್ವರಾತ್ಮಿಕ ಸಂಗೀತ ಶಾಲೆಯ ಚಂಪಕಾ ಶ್ರೀಧರ್ ಸಂಗಡಿಗರು, ಶಾರದಾ ಸಂಗೀತ ಶಾಲೆಯ ಮೀನಾಕ್ಷಿ ಭಟ್ ಸಂಗಡಿಗರು, ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಪದಾಧಿಕಾರಿಗಳು, ಮಾರುತಿ ಭಜನಾ ಮಂಡಳಿಯ ಸದಸ್ಯರು ಕನ್ನಡ ಗೀತ ಗಾಯನ ನರ್ತನ ಕಾರ್ಯಕ್ರಮ ನಡೆಸಿಕೊಟ್ಟರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
