CHIITRADURGA NEWS | 01 AUGUST 2024
ಚಿತ್ರದುರ್ಗ: ಚಿತ್ರದುರ್ಗದ ಸದಾಶಿವನಗರದ ಬಿ.ವಿ. ವಿರಾಜಕುಮಾರ್, ಬಿ.ವಿ. ಶಿವಲೀಲಾ ಇವರ ಮಗಳಾದ ಬಿ.ವಿ.ಸಮೃದ್ಧಿ ಅವರು ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದಕ್ಕಾಗಿ “ಕನ್ನಡ ಕುವರಿ” (Kannada kuvari) ಜಿಲ್ಲಾ ಪ್ರಶಸ್ತಿ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಕ್ಕಾಗಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: SupreemCourt; ಸುಪ್ರೀಂಕೋರ್ಟ್ ತೀರ್ಪು | ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು | ಗೋವಿಂದ ಕಾರಜೋಳ
ದಾವಣಗೆರೆಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕನ್ನಡ ಕುವರಿ ಜಿಲ್ಲಾ ಪ್ರಶಸ್ತಿ ಪ್ರಧಾನ ಹಾಗೂ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆಸಲಾಯಿತು.
ಈ ವೇಳೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶನ ಶಣೈ, ಮಹಿಳಾ ಸಂಸ್ಥಾಪಕರಾದ ಜ್ಯೋತಿ ಗಣೇಶ ಶೆಣೈ, ಜನ ಸಿರಿ ಫೌಂಡೇಶನ್‍ನ ಸಂಸ್ಥಾಪಕರಾದ ಜಯಲಕ್ಷ್ಮಿ, ರಾಮಚಂದ್ರ ಹೊಳ್ಳ, ಕೇರಳ ರಾಜ್ಯದ ಕಲಾ ಕುಂಚ ಅಧ್ಯಕ್ಷೆ ಜಯಲಕ್ಷ್ಮಿ ಕಾರಂತ್ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
