By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    7 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    8 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    8 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    12 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    20 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    19 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    20 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    3 days ago
Reading: ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ | ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ | ಸಚಿವ ಡಿ.ಸುಧಾಕರ್

News Desk Chitradurga News
Last updated: 1 November 2025 18:06
News Desk Chitradurga News
10 months ago
Share
Minister D. Sudhakar hoisted the national flag at the Kannada Rajyotsava program
ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು
SHARE

CHITRADURGA NEWS | 01 NOVEMBER 2025

ಚಿತ್ರದುರ್ಗ: ಒಂದು ನಾಡಿನ ನಿಜವಾದ ಸಂಪತ್ತು ಎಂದರೆ ಪರರ ಧರ್ಮ ಹಾಗೂ ಪರರ ವಿಚಾರವನ್ನು ಸಹನೆಯಿಂದ ಕಾಣುವುದು ಎಂದು 9ನೇ ಶತಮಾನದ ಕನ್ನಡದ ಲಾಕ್ಷಣಿಕ ಗ್ರಂಥ ಕವಿರಾಜ ಮಾರ್ಗದಲ್ಲಿ ಹೇಳಲಾಗಿದೆ. ಪರಧರ್ಮ ಸಹಿಷ್ಣುತೆಯೇ ಕನ್ನಡ ನಾಡಿನ ನಿಜ ಅಂತಃಸತ್ವ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿಪಾದಿಸಿದರು.

ಇದನ್ನೂ ಓದಿ: ಕಲಾಶ್ರೀ ಸ್ಪರ್ಧೆ | ನೋಂದಣಿಗೆ ಸೂಚನೆ

ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡಿದರು.

ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಹಲವು ಧರ್ಮಗಳಿದ್ದರೂ ಸಾಮರಸ್ಯದಿಂದ ಎಲ್ಲರೂ ಬದುಕುತಿದ್ದೇವೆ. ಇದು ಕನ್ನಡಿಗರ ಔದಾರ್ಯ, ಮಾನವೀಯತೆಯನ್ನು ಜಗತ್ತಿಗೆ ಎತ್ತಿ ತೋರಿಸಿದೆ. ಕನ್ನಡ ನಾಡಿನ ಬಹುತೇಕ ಸಾಹಿತಿಗಳು ತಮ್ಮ ಕಾವ್ಯದಲ್ಲಿ ಇದನ್ನು ಚಿತ್ರಿಸಿದ್ದಾರೆ ಎಂದರು.

ಆಧುನಿಕ ಮಾಕ್ರ್ಸ್‍ವಾದ, ಸ್ತ್ರೀವಾದ, ಅಸ್ತಿತ್ವವಾದ, ಕಾಯಕದ ಸಮಾನತೆ, ಇಂತಹ ಹಲವು ತಾತ್ವಿಕ ಸಿದ್ಧಾಂತಗಳನ್ನು ಎಂಟುನೂರು ವರ್ಷಗಳ ಮೊದಲೇ ಕನ್ನಡಿಗ ವಚನಕಾರರ ತಾತ್ವ್ವಿಕ ವಿಚಾರಗಳಾಗಿವೆ. ಕುಮಾರವ್ಯಾಸರು, ಕನಕದಾಸರು, ಪುರಂದರದಾಸರು, ಅವರ ವಿಚಾರಗಳು ಸಮಾಜ ಸುಧಾರಣೆಯ ಚಿಂತನೆಗಳಾಗಿವೆ. 

ಇದನ್ನೂ ಓದಿ: ಪೌರ ಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಿ | ಆಯೋಗದ ಅಧ್ಯಕ್ಷ ರಘು ಪಿ ಸೂಚನೆ

ಆಧುನಿಕ ಕವಿಗಳಾದ ಕುವೆಂಪು, ಮಾಸ್ತಿ, ಬೇಂದ್ರೆ, ಗೋಕಾಕ್, ಕಾರ್ನಾಡ್, ಕಂಬಾರ ಮುಂತಾದವರು ಕನ್ನಡದ ಭಾಷಾ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ನಾಡನ್ನಾಳಿದ ಎಲ್ಲಾ ರಾಜರು ಕವಿಗಳಿಗೆ ಆಶ್ರಯ ನೀಡಿ ಕನ್ನಡವನ್ನು ಬೆಳಸಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಸ್ವಾತಂತ್ರ್ಯ ಪೂರ್ವದಿಂದಲೇ ಭಾಷವಾರು ಪ್ರಾಂತ್ಯ ರಚನೆಗಾಗಿ ಹೋರಾಟ ಆರಂಭವಾಗಿತ್ತು. ಹರಿದು ಹಂಚಿ ಹೋಗಿದ್ದ ಕನ್ನಡ ನಾಡಿನ ಭಾಗಗಳು ಪುನ: ಒಂದಾಗಿ ಸಾಂಸ್ಕøತಿಕ ಏಕತೆ ಹಾಗೂ ರಾಜಕೀಯ ಏಕತೆಯನ್ನು ಸಾಧಿಸಬೇಕು ಎಂಬ ಸದಾಶಯದಿಂದ ಏಕೀಕರಣ ಚಳುವಳಿ ಹುಟ್ಟಿಕೊಂಡಿತು. 

ಡೆಪ್ಯೂಟಿ ಚನ್ನಬಸಪ್ಪ, ಆಲೂರು ವೆಂಕಟರಾಯರು, ಬಿ.ಎಂ.ಶ್ರೀಕಂಠಯ್ಯ, ಕುವೆಂಪು, ಯು.ರಾಮರಾವ್, ಬೆನಗಲ್ ಶಿವರಾಂ, ಬೆನಗಲ್‍ರಾಮರಾವ್, ಮದವೀಡು ಕೃಷ್ಣರಾವ್, ಕಡಪ ರಾಘವೇಂದ್ರರಾವ್, ದೇಶ್‍ಪಾಂಡೆ, ಗಂಗಾಧರರಾವ್, ಗದಿಗೆಯ್ಯ, ಹೊನ್ನ ಪುರಮಠ್, ಹರ್ಡೇಕರ್ ಮಂಜಪ್ಪ, ಹುಯಿಲಗೋಳ ನಾರಾಯಣರಾವ್, ಕಾರ್ನಾಡ್ ಸದಾಶಿವರಾವ್, ಶ್ರೀನಿವಾಸ ಮಲ್ಯ, ಕೆ.ಆರ್.ಕಾರಂತ್, ಆರ್.ಆರ್.ದಿವಾಕರ್, ಡಾ.ನಾಗನಗೋಡ, ಅಂದಾನಪ್ಪ ದೊಡ್ಡಮೇಟಿ, ಜಿನರಾಜ್ ಹೆಗಡೆ, ಚಿತ್ರದುರ್ಗದ ರಾಷ್ಟ್ರನಾಯಕ ಸಿದ್ದವ್ವನಹಳ್ಳಿ ನಿಜಲಿಂಗಪ್ಪ, ಹುಲ್ಲೂರು ಶ್ರೀನಿವಾಸ ಜೋಯಿಸ್ ಮೊದಲಾದವರು ಏಕೀಕರಣಕ್ಕಾಗಿ ಶ್ರಮಿಸಿದರು. 

ಇದನ್ನೂ ಓದಿ: TAPCMS | ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರು ಅವಿರೋಧ ಆಯ್ಕೆ

ಇವರ ಹೋರಾಟಗಳ ಫಲವಾಗಿ ಇಂದು ನಾವು ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಸಚಿವ ಡಿ.ಸುಧಾಕರ್ ಸ್ಮರಿಸಿದರು.

ಇಂಗ್ಲೀಷ್ ಭಾಷೆಗಿಂತ ಒಂದೂವರೆ ಸಾವಿರ ವರ್ಷದಷ್ಟು ಪ್ರಾಚೀನ ಭಾಷೆ ಕನ್ನಡ. ಕ್ರಿಸ್ತ ಹುಟ್ಟುವ ಮುನ್ನವೇ ಕನ್ನಡ ಆಡು ಭಾಷೆಯಾಗಿತ್ತು. ಉಪನಿಷತ್ತು, ಮಹಾಭಾರತ ಮತ್ತು ತಮಿಳು ಕಾವ್ಯಗಳಲ್ಲಿ ಕನ್ನಡಿಗರ ಉಲ್ಲೇಖವಿದೆ. ಕ್ರಿ.ಶ. 450ರ ಕನ್ನಡದ ಮೊದಲ ಶಾಸನ-ಹಲ್ಮಿಡಿ ಶಾಸನದಿಂದ ನಮ್ಮ ಭಾಷೆ ಬರಹರೂಪಕ್ಕೆ ಬಂದು ಸಾಹಿತ್ಯ ರೂಪ ಪಡೆದು ಗ್ರಂಥಸ್ಥ ಸ್ವರೂಪಕ್ಕೆ ಬಂದಿತು ಎಂದರೆ ಆಶ್ಚರ್ಯವಾಗುತ್ತದೆ. 

ಸರ್ಕಾರ ಇತ್ತೀಚೆಗೆ ಈ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸಲು ಹಲ್ಮಿಡಿ ಶಾಸನದ ಪ್ರತಿರೂಪವನ್ನು ಎಲ್ಲರೂ ನೋಡಲೆಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಷ್ಠಾಪಿಸಿದೆ. ಕನ್ನಡವನ್ನು ಉಳಿಸಿ-ಬೆಳೆಸುವ ಪ್ರತಿಯೊಬ್ಬ ಕನ್ನಡಿಗನು ಆತ್ಮ ಸಮರ್ಪಿತವಾಗಿ ಪ್ರಯತ್ನ ಪಡಬೇಕು ಎಂದು ಸಚಿವ ಡಿ.ಸುಧಾಕರ್ ಕರೆ ನೀಡಿದರು.

ಗುಣಮಧುರ ಎಂಬ ರಾಜನ ಗುಣಗಾನ ಮಾಡುವ ಮೊದಲ ಕನ್ನಡ ಪದ್ಯ ತಮಟಕಲ್ಲಿನ ಮೊದಲ ಶಾಸನದಲ್ಲಿದೆ. ಗಂಡುಗಲಿ ಮದಕರಿನಾಯಕ, ವೀರ ವನಿತೆ ಓಬವ್ವ ಕನ್ನಡಿಗರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಕನ್ನಡ ಭಾಷೆಯ ಉಳಿವಿಗಾಗಿ, ಬೆಳವಣಿಗೆಗಾಗಿ ಸರ್ಕಾರ ನಾನಾ ರೀತಿಯಲ್ಲಿ ಕೆಲಸ ಮಾಡುತ್ತಿದೆ. 

ಇದನ್ನೂ ಓದಿ: ಸರ್ದಾರ್ ವಲ್ಲಭಬಾಯಿ ಪಟೇಲ್‌ | ನ.12 ರಂದು ಏಕತೆಯ ಸಂದೇಶ ಸಾರಲು ಪಾದಯಾತ್ರೆ | ಸಂಸದ ಗೋವಿಂದ ಕಾರಜೋಳ

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಕಾವಲು ಸಮಿತಿ ನೇಮಿಸಿ ಆಡಳಿತ ಭಾಷೆಯಾಗಿ ಕನ್ನಡ ಕಡ್ಡಾಯ ಮಾಡಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸಿದೆ. 

ಕನ್ನಡ ಭಾಷೆ ಬಾರದಿರುವ ಉದ್ಯೋಗಿಗಳಿಗೆ ಕನ್ನಡ ಕಲಿಸಲು “ಕನ್ನಡ ಕಲಿಕಾ ಘಟಕ’’ ವನ್ನು ಸ್ಥಾಪಿಸಿ ಸರ್ಕಾರವು ಅಗತ್ಯ ಬೋಧಕ ಸಿಬ್ಬಂದಿ ಮತ್ತು ಕಲಿಕಾ ಸಾಮಗ್ರಿಯನ್ನು ಒದಗಿಸಿ ಹಾಗೆಯೇ ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಜಿಲ್ಲೆಯ ಹನುಮಂತಪ್ಪ ಮಾರಪ್ಪ ಚೀಳಂಗಿ ಅವರಿಗೆ ಸಚಿವ ಡಿ.ಸುಧಾಕರ್ ಸಂದೇಶ ಭಾಷಣದಲ್ಲಿ ಅಭಿನಂದಿಸಿದರು.  

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ:

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 26 ಮಂದಿ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಏರ್ಪಡಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಿದ ಗಣತಿದಾರರನ್ನೂ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ:

ಚಿತ್ರದುರ್ಗ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ವೆಸ್ಟರ್ನ್ ಹಿಲ್ಸ್ ಹಾಗೂ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿ ಸಂಸ್ಕøತಿ ಹಾಗೂ ಮಹತ್ವ ಸಾರುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

 ಇದನ್ನೂ ಓದಿ: ವಿಜ್ಞಾನ ನಾಟಕ ಸ್ಪರ್ಧೆ | ಹೊಳಲ್ಕೆರೆಯ ವಾಗ್ದೇವಿ ಶಾಲೆಗೆ ಪ್ರಥಮ ಸ್ಥಾನ | ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕಂಠೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKannada Rajyotsavaಕನ್ನಡ ರಾಜ್ಯೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಕಲಾಶ್ರೀ ಸ್ಪರ್ಧೆ | ನೋಂದಣಿಗೆ ಸೂಚನೆ
Next Article ಕನ್ನಡ ರಾಜ್ಯೋತ್ಸವ | ಕೋಟೆನಾಡಿನಲ್ಲಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ
Leave a Comment

Leave a Reply Cancel reply

Your email address will not be published. Required fields are marked *

ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up