
CHITRADURGA NEWS | 17 OCTOBER 2025
ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: 30 ಲಕ್ಷ ಪಡೆದು ನಕಲಿ ಚಿನ್ನ ಮಾರಿದ್ದ ಇಬ್ಬರ ಬಂಧನ | ತಳಕು ಪೊಲೀಸರ ಕಾರ್ಯಾಚರಣೆ

ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 24 ರಂದು ಸಂಜೆ 05 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗುರುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
