CHITRADURGA NEWS | 08 NOVEMBER 2025
ಚಿತ್ರದುರ್ಗ: ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ಮುಂಭಾಗದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಸೈನ್ಸ್ ಪಾರ್ಕ್‌ನಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಇದನ್ನೂ ಓದಿ: ಹೊಳಲ್ಕೆರೆ ತಾಲ್ಲೂಕಿನಲ್ಲಿ ಉಚಿತ ಕಾಲುಬಾಯಿ ಜ್ವರದ ಲಸಿಕೆ ಅಭಿಯಾನ
ಕಾರ್ಯಕ್ರಮದಲ್ಲಿ ಜಾನಪದಗೀತೆಗಳು ಮೊಳಗಿದವು. ಜಾನಪದ ಗೀತೆಗಳೊಂದಿಗೆ ಕವಿಗಳು, ದಾಸರು ಬರೆದಿರುವ ಕಾವ್ಯಗಳನ್ನು, ಕೀರ್ತನೇಗಳನ್ನು ಜಾನಪದ ಕಲಾವಿದರಾದ ಗಂಜಿಗಟ್ಟೆ ಕೃಷ್ಣಮೂರ್ತಿ ಹಾಗೂ ಟಿ.ಮೀನಾಕ್ಷಿ ಇವರ ಕಂಠದಲ್ಲಿ ಸೊಗಸಾಗಿ ಮೂಡಿ ಬಂದವು.
ಕಾಲೇಜಿನ ಪ್ರಾಂಶುಪಾಲರಾದ ಟಿ.ಶೇಖರ್ ರೆಡ್ಡಿ ಮಾತನಾಡಿ, ಕನ್ನಡ ಭಾಷೆ ತುಂಬಾ ಶ್ರೀಮಂತ ಭಾಷೆ. ಭಾಷೆಯನ್ನ ಹಿಂದಿನ ಕವಿಗಳು, ವಿದ್ವಾಂಸರು, ದಾಸರು, ಶರಣರು ಬರೆದು, ಹಾಡಿ ಬೆಳೆಸಿದ ಭಾಷೆಯಿದು. ಇದನ್ನು ನಾವುಗಳು ಉಳಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸನಿಯ ಸಿಂಚನ, ಅತಿಥಿಯಾಗಿ ಭಾಗವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ಉಪನ್ಯಾಸ ನೀಡಿದರು.
ಇದನ್ನೂ ಓದಿ: ನೀನಾಸಂ ನಾಟಕಗಳು ಮನುಷ್ಯ ಜೀವನದ ಕೈಗನ್ನಡಿಯಾಗಿವೆ | ಶಿವಯೋಗಿ ಸಿ.ಕಳಸದ
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರರು, ಉಪನ್ಯಾಸಕರು, ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
