CHITRADURGA NEWS | 19 NOVEMBER 2026
ಚಿತ್ರದುರ್ಗ: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ನ.18ರಂದು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ ‘ಕನ್ನಡ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಕನ್ನಡ ಪ್ರಾಧ್ಯಾಪಕ ಶ್ರೀರಾಮರೆಡ್ಡಿ ಜಿ.ವಿ., ಕನ್ನಡ ಭಾಷೆ ನಮ್ಮೆಲ್ಲರನ್ನು ಒಗ್ಗೂಡಿಸುವ ಶಕ್ತಿಯಾಗಿದೆ. ಜಾತಿ, ಧರ್ಮ ಹಾಗೂ ಮತಗಳ ವೈವಿಧ್ಯತೆಯ ನಡುವೆಯೂ ಭಾಷೆಯ ಆಧಾರದ ಮೇಲೆ ಕನ್ನಡಿಗರೆಲ್ಲರೂ ಒಂದೇ ಎಂಬ ಭಾವನೆ ಮೂಡಲು ಕನ್ನಡ ಭಾಷೆ ಕಾರಣವಾಗಿದೆ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಕೃಷಿಗಾಗಿ ಕನ್ನಂಬಾಡಿ ಅಣೆಕಟ್ಟು, ವ್ಯವಹಾರಕ್ಕಾಗಿ ಮೈಸೂರು ಬ್ಯಾಂಕ್ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಪ್ರೋತ್ಸಾಹ ನೀಡಿದರು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಇಂದಿಗೂ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸ್ಮರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಎನ್.ಜಿ. ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಉಸಿರು, ಬದುಕು, ಭಾವನೆ, ಸಂಸ್ಕೃತಿ, ಪರಂಪರೆ ಹಾಗೂ ಅಸ್ಮಿತೆಯಾಗಿದೆ. ಕವಿಗಳು ಕವಿತೆಗಳ ಮೂಲಕ, ಸಾಹಿತಿಗಳು ಬರಹಗಳ ಮೂಲಕ ಹಾಗೂ ಕಲಾವಿದರು ತಮ್ಮ ಕಲೆಯ ಮೂಲಕ ಸಮಾಜವನ್ನು ಜಾಗೃತಗೊಳಿಸಿ ಸಂಸ್ಕೃತಿಯನ್ನು ಜೀವಂತವಾಗಿರಿಸುತ್ತಾರೆ. ಆದ್ದರಿಂದ ಕನ್ನಡ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಇದನ್ನೂ ಓದಿ: ಪುರುಷರ ರಕ್ಷಣೆಗೆ ಪ್ರತ್ಯೇಕ ಕಾನೂನು ರೂಪಿಸಲು ಆಗ್ರಹ | ಮಹಿಳೆಯರಂತೆ ಪುರುಷರಿಗೂ ರಕ್ಷಣೆ ಸಿಗಲಿ
ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯಕುಮಾರ್ ಮಾತನಾಡಿ, 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ಮೊನಿಷಾ ಎಸ್. ಮತ್ತು ದೀಪಿಕ ಎಂ. ಅವರ ಸಾಧನೆಯನ್ನು ಅಭಿನಂದಿಸಿದರು. ವಿದ್ಯಾರ್ಥಿನಿಯರ ಯಶಸ್ಸಿಗೆ ಕಾರಣರಾದ ಪೋಷಕರು ಹಾಗೂ ಶಿಕ್ಷಕರನ್ನು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಪೂರ್ಣ ಅಂಕ ಗಳಿಸಿದ ಮೊನಿಷಾ ಎಸ್. ಮತ್ತು ದೀಪಿಕ ಎಂ. ಅವರಿಗೆ ‘ಕನ್ನಡ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಪ್ರಾಧ್ಯಾಪಕ ಶ್ರೀರಾಮರೆಡ್ಡಿ ಜಿ.ವಿ. ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಾದ ಚಿರಂತ್ ಸಜ್ಜನ್ ಮತ್ತು ಕನ್ನಿಕ ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ಭಾಷಣ ಮಾಡಿದರು. ಅನರ್ಘ್ಯ ಪ್ರಾರ್ಥಿಸಿದರು. ಆರಾಧಿತ ಸ್ವಾಗತಿಸಿದರು. ಪ್ರತೀಕ್ಷಾ ವಂದಿಸಿದರು. ಭುವನ್ ಉದ್ಘಾಟಕರ ಪರಿಚಯ ಮಾಡಿಕೊಟ್ಟರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

