ಮುಖ್ಯ ಸುದ್ದಿ
ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | ಇಲ್ಲಿದೆ ಪೂರ್ಣ ವಿವರ

CHITRADURGA NEWS | 24 MARCH 2025
ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾ.27 ಮತ್ತು 28 ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದರು.
Also Read: Kannada Novel: 25. ಉತ್ತರೆ ಮಳೆ ಸುರಿಯಿತು
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಘವೇಂದ್ರಸ್ವಾಮಿ ವೇದಿಕೆ, ಡಾ.ಡಿ.ಎಂ.ನಂಜುಂಡಪ್ಪ ಸಭಾಂಗಣದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ರಾಷ್ಟ್ರಧ್ವಜಾರೋಹಣವನ್ನು ಶಾಸಕ ಡಾ.ಎಂ.ಚಂದ್ರಪ್ಪ, ಪರಿಷತ್ ಧ್ವಜವನ್ನು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ನಾಡಧ್ವಜವನ್ನು ತಾಲೂಕು ಅಧ್ಯಕ್ಷ ಎನ್.ಶಿವಮೂರ್ತಿ ಆರೋಹಣ ಮಾಡಲಿದ್ದಾರೆ ಎಂದರು.
ಚಿತ್ರದುರ್ಗ ರಸ್ತೆಯ ಟೋಲ್‌ಗೇಟ್‌ನಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು ಉದ್ಘಾಟಿಸುವರು.
ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್ ಕನ್ನಡಾಂಭೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಪುರಸಭೆ ಉಪಾಧ್ಯಕ್ಷೆ ಎಚ್.ಆರ್.ನಾಗರತ್ನ ವೇದಮೂರ್ತಿ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ತಹಶೀಲ್ದಾರ್ ಬೀಬಿ ಫಾತಿಮಾ, ಇಓ ಪಿ.ವಿಶ್ವನಾಥ್, ಬಿಇಓ ಎಚ್.ಶ್ರೀನಿವಾಸ್, ಸಿಪಿಐ ಎಂ.ಡಿ.ಚಿಕ್ಕಣ್ಣನವರ್ ಇತರರು ಭಾಗವಹಿಸುವರು.
Also Read: ಚಿತ್ರದುರ್ಗದ ಇಂಚಿಂಚೂ ಮಾಹಿತಿ ಕಲೆ ಹಾಕಿರುವ ಬುಕಾನನ್ | ಎಂ.ಜಿ.ಆರ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವೇದಿಕೆ ಉದ್ಘಾಟಿಸಲಿದ್ದು, ಮುಖ್ಯಧ್ವಾರವನ್ನು ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ವಾಣಿಜ್ಯ ಮಳಿಗೆಗಳನ್ನು ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನ್ ಉದ್ಘಾಟಿಸುವರು. ಬಾಳೆಹೊಸೂರು ಭಾವೈಕ್ಯತಾ ಪೀಠದ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಪಾಂಡೋಮಟ್ಟಿ ಡಾ.ಗುರುಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಕಾರಜೋಳ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಎಂಎಲ್ಸಿ ಕೆ.ಎಸ್.ನವೀನ್ ಪುಸ್ತಕ ಮಳಿಗೆ ಉದ್ಘಾಟಿಸುವರು.
ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ಪುಸ್ತಕಗಳ ಲೋಕಾರ್ಪಣೆ ಮಾಡುವರು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿ ಬಿಡುಗಡೆ ಮಾಡಲಿದ್ದಾರೆ. ಪ್ರೊ.ಜಿ.ಪರಮೇಶ್ವರಪ್ಪ ಸಮ್ಮೇಳನಾಧ್ಯಕ್ಷರ ನುಡಿ ನುಡಿಯಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ವಿವರಿಸಿದರು. ಮಧ್ಯಾಹ್ನದ ಮಾತು, ಮಂಥನದಲ್ಲಿ, ಸಾಹಿತ್ಯ ಮತ್ತು ವೈವಿಧ್ಯತೆ ಗೋಷ್ಠಿಯ ಸಾನ್ನಿಧ್ಯವನ್ನು ಶ್ರೀ ಶಾಂತವೀರ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಹಿಸುವರು.
ಜಾನಪದ ವಿದ್ವಾಂಸ ಡಾ.ಮೈಲನಹಳ್ಳಿ ರೇವಣ್ಣ ಕನ್ನಡ ಸಾಹಿತ್ಯ ಪ್ರಸ್ತುತ ಕಥನ ಕ್ರಮಗಳು ವಿಷಯ ಮಂಡನೆ ಮಾಡುವರು. ಹಿರಿಯೂರು ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಎನ್.ಮಹೇಶ್ ವಿಷಯ ಮಂಡನೆ ಮಾಡುವರು. ವಚನ ಸಾಹಿತ್ಯ ಕಲ್ಯಾಣ ಕಾಲದ ಶರಣೆಯರು ಗೋಷ್ಠಿಯಲ್ಲಿ ಸಾಹಿತಿ ಪ್ರೊ.ಎಚ್.ಲಿಂಗಪ್ಪ ವಿಷಯ ಮಂಡನೆ ಮಾಡುವರು.
ಕನ್ನಡ ಅಸ್ಮಿತೆ ಮತ್ತು ಸ್ತ್ರೀ ಸಮಾನತೆ ಗೋಷ್ಠಿಯಲ್ಲಿ ಹೊಳಲ್ಕೆರೆ ಬ್ರಹ್ಮಕುಮಾರಿ ಡಾ.ಸುಮಿತ್ರಕ್ಕ ಸಾನ್ನಿಧ್ಯ ವಹಿಸುವರು. ತಹಶೀಲ್ದಾರ್ ಬೀಬಿ ಫಾತಿಮಾ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗದ ಪ್ರಾಧ್ಯಾಪಕಿ ಡಾ.ಪ್ರೇಮಾ ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಮಾನತೆ ವಿಷಯ ಮಂಡನೆ ಮಾಡುವರು. ಜಗಳೂರು ಸರ್ಕಾರಿ ಕಾಲೇಜು ಉಪನ್ಯಾಸಕಿ ಆರ್.ರಾಣಿ ಕರ್ನಾಟಕ ಏಕೀಕರಣ ಚಳುವಳಿ ನಡೆದು ಬಂದ ಹಾದಿ ಕುರಿತು ವಿಷಯ ಮಂಡನೆ ಮಾಡುವರು.
Also Read: ಏಪ್ರಿಲ್ 16, 17 ಸರ್ಕಾರಿ ನೌಕರರ ಕ್ರೀಡಾಕೂಟ | ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ
ಇದೇ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಜಾನಪದ ಗಾಯಕ ಎನ್.ಮೋಹನ್‌ಕುಮಾರ್ ಗಾಯನ ಮಾಡುವರು.
ಮಾ.28 ರಂದು ಸಂಕೀರ್ಣ-ಶಿಕ್ಷಣ, ಸಮಾನತೆ, ಒಳಮೀಸಲಾತಿ, ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ಗೋಷ್ಠಿಗಳು ನಡೆಯುವವು.
ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಡಾ.ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆಹಾರ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಕಾ.ರಾಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಉಪಸ್ಥಿತಿ ವಹಿಸುವರು.
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಸವಾಲುಗಳ ಕುರಿತು ಮಾಜಿ ಶಾಸಕ ವೈಎಸ್‌ವಿ ದತ್ತಾ ವಿಷಯ ಮಂಡನೆ ಮಾಡುವರು. ಒಳಮೀಸಲಾತಿ ಕುರಿತು ಚಿಂತಕ ಕೋಡಿಹಳ್ಳಿ ಸಂತೋಷ್ ವಿಷಯ ಮಂಡನೆ ಮಾಡಿದರೆ, ಜಿಲ್ಲೆಯ ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ರೈತ ಮುಖಂಡ ಕೆ.ಸಿ.ಹೊರಕೇರಪ್ಪ ಮಾತನಾಡುವರು.
Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?
ಮಧ್ಯಾಹ್ನ 12 ಗಂಟೆಗೆ ನಡೆಯುವ ಕವಿಗೋಷ್ಠಿಯಲ್ಲಿ ವನಕಲ್ಲು ಸಂಸ್ಥಾನದ ಬಸವರಮಾನಂದ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಹಿತಿ ಪರಮೇಶ್ವರಪ್ಪ ಕುದುರಿ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರ ಜೊತೆ ಸಂವಾದ ನಡೆಯಲಿದ್ದು, ಶ್ರೀ ಈಶ್ವರನಾಂದಪುರಿ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಡಾ.ಬಸವ ಮಾಚಿದೇವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಸಂವಾದದಲ್ಲಿ ನಿವೃತ್ತ ಪ್ರಾಚಾರ್ಯರಾದ ಜೆ.ಯಾದವರೆಡ್ಡಿ, ಸಂಗೇನಹಳ್ಳಿ ಅಶೋಕ್ ಕುಮಾರ್, ಡಾ.ಎಚ್.ಎಲ್.ಪ್ರವೀಣ್‌ಕುಮಾರ್, ಶಿಕ್ಷಕಿ ಗೀತಾ ಭರಮಸಾಗರ, ನಿವೃತ್ತ ಪ್ರಾಧ್ಯಾಪಕ ಬಿ.ಎಂ.ಲಕ್ಷ್ಮೀನಾರಾಯಣ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಬಹಿರಂಗ ಅಧಿವೇಶನ, ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಾ.ಮೀರಾಸಾಬಿಹಳ್ಳಿ ಶಿವಣ್ಣ ಸಮಾರೋಪ ಭಾಷಣ ಮಾಡುವರು.
Also Read: ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಮಾಜಿ ಶಾಸಕರಾದ ಎ.ವಿ.ಉಮಾಪತಿ, ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ, ಜಿ.ಸಿ.ಮಂಜುನಾಥ್, ಯು.ಎಚ್.ತಿಮ್ಮಣ್ಣ ಉಪಸ್ಥಿತರಿರುವರು.
ಸುದ್ದಿಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ಜಿ.ಪರಮೇಶ್ವರಪ್ಪ, ತಾಲೂಕು ಅಧ್ಯಕ್ಷರಾದ ವಿ.ಎಲ್.ಪ್ರಶಾಂತ್, ಎನ್.ಶಿವಮೂರ್ತಿ ಇತರರಿದ್ದರು.
