Connect with us

    Gorucha: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ | ಗೊ.ರು.ಚ ಸರ್ವಾಧ್ಯಕ್ಷತೆ

    go.ru.channabasappa

    ಮುಖ್ಯ ಸುದ್ದಿ

    Gorucha: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ | ಗೊ.ರು.ಚ ಸರ್ವಾಧ್ಯಕ್ಷತೆ

    CHITRADURGA NEWS | 20 NOVEMBER 2024

    ಚಿತ್ರದುರ್ಗ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಜಾನಪದ ತಜ್ಞ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

    ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22 ರಂದು ಮೂರು ದಿನಗಳ ಕಾಲ ನಡೆಯುವ 87ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೋರುಚ ಆಯ್ಕೆ ಮಾಡಲಾಗಿದೆ.

    ಇದನ್ನೂ ಓದಿ: ತಾಯಿ ಮಗಳು ಆತ್ಮಹತ್ಯೆ | ಚಿಕ್ಕಂದವಾಡಿಯಲ್ಲಿ ಧಾರುಣ ಘಟನೆ

    ಈ ಹಿಂದೆ ಚಿತ್ರದುರ್ಗದ ಮೂರು ಜನ ಸಾಹಿತಿಗಳ ಹೆಸರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಶಿಫಾರಸ್ಸು ಮಾಡಲಾಗಿತ್ತು.

    ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಹೆಸರನ್ನು ಕಸಾಪ ಪ್ರಸ್ತಾಪಿಸಿದ್ದಾಗ ಶ್ರೀಗಳು, ಸಾಹಿತಿಗಳನ್ನೇ ಆಯ್ಕೆ ಮಾಡಬೇಕು ಎಂದು ಹೇಳಿದ್ದರು.

    ಇದನ್ನೂ ಓದಿ: ಬೈಕ್ – ಟಾಟಾ ಏಸ್‌ ನಡುವೆ ಅಪಘಾತ | ಇಬ್ಬರು ಯುವಕರು ಸಾವು

    ಇವರೊಟ್ಟಿಗೆ ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಹಾಗೂ ಹಿರಿಯ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿತ್ತು.

    ಅಂತಿಮವಾಗಿ ಚಿತ್ರದುರ್ಗ ಜಿಲ್ಲೆಗೆ ಹೊಂದಿಕೊಂಡಿರುವ ಪಕ್ಕದ ಚಿಕ್ಕಮಗಳೂರು ಜಿಲ್ಲೆಯ, ಹೊಸದುರ್ಗ ತಾಲೂಕಿನ ಪಕ್ಕದಲ್ಲೇ ಇರುವ ತರೀಕೆರೆಯ ಗೊಂಡೇದೆಹಳ್ಳಿಯ ಗೊ.ರು.ಚನ್ನಬಸಪ್ಪ ಅವರನ್ನು ಸಾಹಿತ್ಯ ಸಮ್ಮೇಳನದ ಸಾರ್ವಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

    ಇದನ್ನೂ ಓದಿ: ಭದ್ರಾದಿಂದ ಮುಂದುವರೆದ ಒಳಹರಿವು | ವಿವಿ ಸಾಗರ ಜಲಾಶಯ ಮಟ್ಟ ಎಷ್ಟಾಯ್ತು ?

    ಚಿತ್ರದುರ್ಗ-ಚಿಕ್ಕಮಗಳೂರು ಜಿಲ್ಲೆಗಳನ್ನು ಸೇರಿಸಿ 2024 ಫೆಬ್ರವರಿ 2 ರಂದು ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಎರಡೂ ಜಿಲ್ಲಾ ಘಟಕಗಳು ಆಯೋಜಿಸಿದ್ದ ಪ್ರಪ್ರಥಮ ಅಂತರ್ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗೊ.ರು.ಚನ್ನಬಸಪ್ಪ ಉದ್ಘಾಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top