Connect with us

    Karaway protest; ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

    ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

    ಮುಖ್ಯ ಸುದ್ದಿ

    Karaway protest; ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

    CHITRADURGA NEWS | 14 SEPTEMBER 2024

    ಚಿತ್ರದುರ್ಗ: ಕೇಂದ್ರ ಸರ್ಕಾರ(central government)ದ ಹಿಂದಿ ವಿರೋಧಿ ಹೇರಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ(protest) ನಡೆಸಿದರು.

    ಕೇಂದ್ರ ಸರ್ಕಾರ ಈ ಕೂಡಲೆ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲಾ 22 ಭಾಷೆಗಳನ್ನು ಅಧಿಕೃತ, ಆಡಳಿತ ಭಾಷೆಯನ್ನಾಗಿ ಘೋಷಿಸಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು. 343 ರಿಂದ 351 ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲಾ ಭಾಷೆಗಳಿಗೂ ಒಕ್ಕೂಟದ ದೃಷ್ಠಿಯಲ್ಲಿ ಸಮಾನವೆಂದು ಪರಿಗಣಿಸಬೇಕು.

    ಕ್ಲಿಕ್ ಮಾಡಿ ಓದಿ: Lok Adalat; ನ್ಯಾಯಾಲಯದಲ್ಲಿ ಒಂದಾದ ದಂಪತಿಗಳು | ನಾವು ಒಂದಾಗಿ ಬಾಳುತ್ತೇವೆ

    ಕರ್ನಾಟಕದಲ್ಲಿರುವ ಎಲ್ಲಾ ಕೇಂದ್ರ ಸರ್ಕಾರಿ ಶಾಲೆಗಳು ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಕನ್ನಡದಲ್ಲೇ ಎಲ್ಲಾ ಬಗೆಯ ವ್ಯವಹಾರಗಳು ನಡೆಯಬೇಕು. ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರವನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷ ಆರ್.ಜಿ.ಲಕ್ಷ್ಮಣ್, ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಜಿ.ರಾಜಪ್ಪ, ನಗರಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಮೇಶ್ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top