
CHITRADURGA NEWS | 26 JULY 2025
ಚಿತ್ರದುರ್ಗ: ನಗರದ ಬಿಜೆಪಿ ಜಿಲ್ಲಾ ಘಟಕದಿಂದ ಇಲ್ಲಿನ ಒನಕೆ ಓಬವ್ವ ವೃತ್ತದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿ | ಕರಡಿ ಸಾವು

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಕಾರ್ಗಿಲ್ ಯುದ್ಧ ನಡೆದು 26 ವರ್ಷಗಳು ಆಗಿದ್ದು, ಕಾರ್ಗಿಲ್ ಬೆಟ್ಟಗಳಿಂದ ಉಗ್ರಗಾಮಿಗಳನ್ನು ಹೊಡೆದೋಡಿಸಿದ ಸಂದರ್ಭವನ್ನು ಸ್ಮರಿಸಲು ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತಿದೆ.
ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಕೊಳ್ಳಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತನ್ನ ಶೌರ್ಯವನ್ನು ಪ್ರದರ್ಶಿಸಿದ ದಿನ ಇದು.
ಆಪರೇಷನ್ ವಿಜಯ್ ಹೆಸರಿನಲ್ಲಿ ಯುದ್ಧ ಘೋಷಣೆ ಕೂಗುವ ಮೂಲಕ ಶತ್ರು ಪಡೆಗಳನ್ನು ಕಾರ್ಗಿಲ್‍ನಿಂದ ಓಡಿಸಿದ ಸಂದರ್ಭವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ನೆನಪಿಸಿಕೊಳ್ಳುತ್ತೇವೆ ಎಂದರು.
ಧೈರ್ಯ ಮತ್ತು ದೃಢಸಂಕಲ್ಪದಿಂದ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ಗೌರವ ಸಲ್ಲಿಸುತ್ತೇವೆ, ಕಾರ್ಗಿಲ್ ಯುದ್ಧದಲ್ಲಿ ಅವರ ಸೈನಿಕರ ತ್ಯಾಗ ನಮ್ಮ ಸಶಸ್ತ್ರ ಪಡೆಗಳ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಈ ದೇಶವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜುನ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಮುಖಂಡರುಗಳಾದ ಚಾಲುಕ್ಯ ನವೀನ್, ತಿಪ್ಪೇಸ್ವಾಮಿ, ನಂದಿ ನಾಗರಾಜ್, ಕವನ, ಶುಂಭು, ಬಸಮ್ಮ, ಶಾಂತಮ್ಮ ರಘು, ಅರುಣ್, ಲಿಂಗರಾಜು, ವರುಣ್, ಪ್ರಭಾಕರ್, ವಸಂತಚಾರ್, ಕಿರಣ್, ಪ್ರಶಾಂತ್ ಕುಮಾರ್ ಮಹಾಂತೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
