CHITRADURGA NEWS | 28 JULY 2026
ಚಿತ್ರದುರ್ಗ: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ PATRIOTIC MARCH ಶೀರ್ಷಿಕೆಯಡಿ ಎಸ್.ಆರ್.ಎಸ್ ಹೆರಿಟೇಜ್ ಶಾಲೆ ವತಿಯಿಂದ ಸುಮಾರು 500 ವಿದ್ಯಾರ್ಥಿಗಳ ಭವ್ಯ ದೇಶಭಕ್ತಿ ಜಾಥಾ ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
ಜಾಥಾವು ಜೆ.ಸಿ.ಆರ್ (JCR) ಮುಖ್ಯ ರಸ್ತೆಯಿಂದ ಆರಂಭವಾಗಿ ದೇಶಪ್ರೇಮದ ಸಂದೇಶವನ್ನು ಸಾರುತ್ತಾ ಹಾಗೂ ಗಡಿಯಲ್ಲಿ ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ನಮ್ಮ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿವರೆಗೆ ಸಾಗಿತು.
ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯದ ಮಹತ್ವ, ದೇಶಭಕ್ತಿ ಹಾಗೂ ಭಾರತೀಯ ಸೈನಿಕರ ಶೌರ್ಯ, ತ್ಯಾಗ ಮತ್ತು ಸಮರ್ಪಣೆಯ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶಗಳನ್ನು ನೀಡಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
ಎಸ್ಪಿ ರಂಜಿತ್ ಕುಮಾರ್ ಭಂಡಾರು, ಮಾಜಿ ಸೈನಿಕರಾದ ಸಣ್ಣ ಸೂರಯ್ಯ, ಎಸ್.ಆರ್.ಎಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ.ಎಲ್.ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಟಿ.ಎಸ್.ರವಿ, ಪ್ರಾಂಶುಪಾಲರಾದ ಎಂ.ಎಸ್.ಪ್ರಭಾಕರ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

