CHITRADURGA NEWS | 28 MAY 2026
ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ಸಲ್ಲಿಸಿದ್ದಾರೆ.
ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಸಂಜೆ 7 ಗಂಟೆ ವೇಳೆಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರಾಜೀನಾಮೆ ಅಂಗೀಕರಿಸುವ ವಿಶ್ಬಾಸವಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿಎಂ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಬಳಿಕೆ ಸದ್ದಿಗೋಷ್ಠಿಯಲ್ಲಿ ವಿದಾಯದ ಮಾತುಗಳನ್ನು ಆಡಿದ ಸಿದ್ದರಾಮಯ್ಯ 2013 ರಿಂದ 2018 ರವರೆಗೆ ಹಾಗೂ 2023 ರಿಂದ 2026 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪಕ್ಷ ಹಾಗೂ ನಾಡಿನ ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸ್ಮರಿಸಿದರು.
ಹಳ್ಳಿಗಾಡಿನಿಂದ ಬಂದ ನಾನು ಎಂದೂ ಶಾಸಕ, ಮಂತ್ರಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕನಾಗುತ್ತೇನೆ ಎಂದು ಕನಸು ಕಂಡಿರಲಿಲ್ಲ. ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ. 2006 ರಲ್ಲಿ ಕಾಂಗ್ರೆಸ್ ಸೇರಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
ತಮ್ಮ ಸುಧೀರ್ಘ ಮಾತುಗಳಲ್ಲಿ ಕಳೆದ ಎಂಟು ವರ್ಷಗಳಲ್ಲಿ ನಾಡಿಗೆ ಸಲ್ಲಿಸಿದ ಸೇವೆ, ಪ್ರಣಾಲಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಕೆ, ಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ ಮಾಡಿಕೊಳ್ಳಲು ಯೋಚನೆ ಮಾಡಿದವನಲ್ಲ ಎಂದು ಹೇಳಿದರು.
1978 ರಲ್ಲಿ ತಾಲೂಕು ಬೋರ್ಡ್ ಮೆಂಬರ್ ಆದವನು.ಮುಂಬರುವ 2028 ಕ್ಕೆ ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಗಲಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ, ನಂಬಿದ ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡಿಲ್ಲ ಎಂದು ತಿಳಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
