ಮುಖ್ಯ ಸುದ್ದಿ
ಕರವೇ ಕಾರ್ಯಕರ್ತರ ಪ್ರತಿಭಟನೆ | ಅಂಚೆ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರೊಂದಿಗೆ ವಾಗ್ವಾದ | ಪೊಲೀಸ್ ಜೀಪ್‍ಗೆ ಅಡ್ಡ ಮಲಗಿ ಪ್ರತಿಭಟನೆ
ಚಿತ್ರದುರ್ಗ ನ್ಯೂಸ್.ಕಾಂ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಚಿತ್ರದುರ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದು, ಕರವೇ ಕಾರ್ಯಕರ್ತರನ್ನು ಬಂಧಿಸಿದರು.
ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ ನೀರು ಹರಿಸುವಂತೆ ಆದೇಶ ಹೊರಡಿಸಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚಿತ್ರದುರ್ಗದ ಪ್ರಧಾನ ಅಂಚೆ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಒಂದು ಹಂತದಲ್ಲಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಧ್ಯೆ ಪ್ರವೇಶಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿಪುತ್ರನ ಪ್ರಾರ್ಥನೆ ಏನು ಗೊತ್ತಾ..
ಈ ವೇಳೆ ವಾಗ್ವಾದ, ತಳ್ಳಾಟ, ನೂಕಾಟ ನಡೆಯಿತು. ಕರವೇ ಜಿಲ್ಲಾಧ್ಯಕ್ಷ ಟಿ.ರಮೇಶ್ ಅವರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸ್ ಜೀಪ್‍ಗೆ ಮುತ್ತಿಗೆ ಹಾಕಿದರು. ಮಹಿಳಾ ಕಾರ್ಯಕರ್ತೆಯೊಬ್ಬರು ಪೊಲೀಸ್ ಜೀಪ್‍ಗೆ ಅಡ್ಡ ಮಲಗಿ ಪ್ರತಿಭಟಿಸಿದರು. ಈ ವೇಳೆ ಪೊಲಿಸರು ರಮೇಶ್ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು.
ಕೆಆರ್‍ಎಸ್ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು ಮಾತ್ರ ಉಳಿದಿದೆ. ಇದರಲ್ಲಿ ಬಳಕೆಗೆ ಸಿಗುವುದು 15 ಟಿಎಂಸಿ ಮಾತ್ರ. ಪರಿಸ್ಥಿತಿ ಹೀಗಿದ್ದೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿ.ಎಂ.ಸಿ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಟಿ.ರಮೇಶ್, ಪದಾಧಿಕಾರಿಗಳಾದ ಜಿ.ರಾಜಪ್ಪ, ವಿಜಯಕುಮಾರ್, ಟಿ.ಕೆ.ಶಿವಮೂರ್ತಿ, ಎಸ್.ಪಿ.ಗಣೇಶ್, ಆರ್.ಜಿ.ಲಕ್ಷ್ಮಣ, ಟಿ. ವೆಂಕಟೇಶ್ ಪ್ರಸಾದ್, ಮಲ್ಲಿಕಾರ್ಜುನ್, ವಸಂತ ಮತ್ತಿತರರಿದ್ದರು.