CHITRADURGA NEWS | 04 APRIL 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಅವೃತ್ತಿಯ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್‍ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ.ಎಂ.ಸಿ.ಜೆ, ಎಂ.ಲಿಬ್‍ಐಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ-ಡಿಪ್ಲೊಮೊ, ಡಿಪ್ಲೊಮೊ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ (https://ksouportal.com/views/StudentHome.aspx) ಮೂಲಕ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704, 7090762378 ಗೆ ಕರೆ ಮಾಡುವುದು ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
