
CHITRADURGA NEWS | 25 JUNE 2024
ಚಿತ್ರದುರ್ಗ: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಬೇಕು. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಇದನ್ನೂ ಓದಿ: ಭೀಮಸಮುದ್ರ ಮಾರುಕಟ್ಟೆಯಲ್ಲಿ ರಾಶಿ ಬೆಲೆ 55 ಸಾವಿರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಕರ ಅರ್ಹತಾ ಪರೀಕ್ಷೆಯು ಎರಡು ಅಧಿವೇಶನಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ಯಾವುದೇ ಲೋಪದೋಷಗಳಿಗೆ, ಆಕ್ಷೇಪಣೆಗಳಿಗೆ ಅವಕಾಶ ನೀಡದಂತೆ, ಪರೀಕ್ಷಾ ಪಾವಿತ್ರ್ಯತೆಯ ಕಾಪಾಡಲು ಹಾಗೂ ಪರೀಕ್ಷಾ ಸುರಕ್ಷತಾ ದೃಷ್ಟಿಯಿಂದ ಹೆಚ್ಚಿನ ಗಮನಹರಿಸಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ: ಲೋಕಾಯುಕ್ತರು ಬರುತ್ತಿದ್ದಾರೆ | ಅಹವಾಲುಗಳಿದ್ದರೆ ಸಲ್ಲಿಸಿ
ಕೇಂದ್ರ ಕಚೇರಿಯಿಂದ ಸರಬರಾಜಾಗುವ ಪ್ರಶ್ನೆ ಪತ್ರಿಕೆಗಳು ಹಾಗೂ ಓಎಂಆರ್ ಶೀಟ್ ಬಂಡಲ್‍ಗಳನ್ನು ಜಿಲ್ಲಾ ಖಜಾನೆಯಲ್ಲಿ ಸುರಕ್ಷಿತವಾಗಿಡುವುದು. ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಯನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮ ವಹಿಸಬೇಕು.
ಅವಧಿಗೂ ಮುಂಚೆ ಅಥವಾ ನಿಗಧಿತ ಅವಧಿಗೂ ತಡವಾಗಿ ತೆಗೆಯುವುದು ಮಾಡದೇ, ನಿಗಧಿತ ವೇಳೆಯಲ್ಲಿ ಯಾವುದೇ ರೀತಿಯ ಚರ್ಚೆಗೆ ಗ್ರಾಸವಾಗದಂತೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಪ್ರಾಥಮಿಕವಾಗಿ ಬೇಕಾಗಿರುವಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ಇದನ್ನೂ ಓದಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಬಿಜೆಪಿ ಕಾರ್ಯಕರ್ತರ ಬಂಧನ | ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ವೇಳೆ ಘಟನೆ
ಪ್ರಸ್ತುತ ಸಾಂಕ್ರಾಮಿಕ ರೋಗಗಳು ಹರಡುವ ಬೀತಿ ಇರುವುದರಿಂದ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ವಾತಾವರಣ ನಿರ್ಮಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಪ್ರಥಮ ಚಿಕಿತ್ಸಾ ಪರಿಕರಗಳೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಗಿರೀಶ್ ಅವರಿಗೆ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸೀರುದ್ದೀನ್ ಮಾತನಾಡಿ, ಶಿಕ್ಷಕರ ಅರ್ಹತಾ ಪರೀಕ್ಷೆಯ ಮೊದಲ ಅಧಿವೇಶನ ಪರೀಕ್ಷೆ ಜೂ. 30 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ 15 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 4,235 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು. ಎರಡನೇ ಅಧಿವೇಶನದ ಪರೀಕ್ಷೆಯು ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ 27 ಕೇಂದ್ರಗಳಲ್ಲಿ ನಡೆಯಲಿದ್ದು, 7,317 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಾಧಿಕಾರಿಗಳಿಗೆ ವಾಹನಗಳನ್ನು ಒದಗಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಎಲ್ಲಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು 144 ಸೆಕ್ಷನ್ ಪ್ರಕಾರ ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಬೇಕು.
ಇದನ್ನೂ ಓದಿ: ಪ್ರತಿಷ್ಠಿತ ಪತಂಜಲಿ ಸ್ಕೂಲ್ ಆಫ್ ನರ್ಸಿಂಗ್ | ಜಿಎನ್‍ಎಂ ನರ್ಸಿಂಗ್ ಪ್ರವೇಶ ಆರಂಭ
ಪರೀಕ್ಷಾ ಮುಗಿದ ನಂತರ ಓ.ಎಂ.ಆರ್ ಉತ್ತರ ಪತ್ರಿಕೆಗಳನ್ನು ಕೇಂದ್ರ ಕಚೇರಿಗೆ ಸಾಗಿಸುವ ವಾಹನಕ್ಕೆ ಮಾರ್ಗಾಧಿಕಾರಿ ಜೊತೆಗೆ ಒಬ್ಬ ಪೊಲೀಸ್ ಸಿಬ್ಬಂದಿ ನೇಮಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಭರತ್ ಎಂ ಕಾಳೇಸಿಂಘೆ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
