CHITRADURGA NEWS | 18 DECEMBER 2025
ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ ಹಾಗೂ ಮಹೇಶ್ವರಸ್ವಾಮಿ ಜಾತ್ರೆ ಜರುಗಿತು.
ಇದನ್ನೂ ಓದಿ: ಮಧ್ಯಂತರ ಬೆಳೆವಿಮೆ ಪರಿಹಾರ ವಿತರಣೆಗೆ ಶೇಂಗಾ, ತೊಗರಿ ಬೆಳೆಗಾರರ ಆಗ್ರಹ
ಬೆಳ್ಳಿಗೆ ಮಹೇಶ್ವರಸ್ವಾಮಿ ಜಾತ್ರೆಯಲ್ಲಿ ಆಬಾಲವೃದ್ಧರಾದಿಯಾಗಿ ಶತಮಾನಗಳಿಂದ ನಡೆದುಕೊಂಡು ಬಂದಿದೆ. ಮಾಗಿಯ ಚಳಿ ಲೆಕ್ಕಿಸದೆ ಶೈಕ್ಷಣಿಕ ಪ್ರಗತಿ, ಮದುವೆ, ಆರೋಗ್ಯ ಸಮಸ್ಯೆ ನಿವಾರಣೆ ಮತ್ತಿತರೇ ಹರಕೆ ಹೊತ್ತು, ಓಂ ನಮಃ ಶಿವಾಯ ಎಂಬ ಉದ್ದಾರದೊಂದಿಗೆ ಭಕ್ತಿ ಮೆರೆದರು.
ಗಂಗಾಪೂಜೆ ನಡೆಸಿ ಪ್ರಸಾದ ವಿನಿಯೋಗ ಜರುಗಿತು. ಜಾತ್ರೆಯಲ್ಲಿ ತಯಾರಿಸುವ ಸಾತ್ವಿಕ ಆಹಾರವಾದ ಅನ್ನ, ಬೆಲ್ಲ, ಹಾಲು, ಬಾಳೆಹಣ್ಣಿನ ಪ್ರಸಾದವನ್ನು ಸಾವಿರಾರು ಭಕ್ತಾದಿಗಳು ಸ್ವೀಕರಿಸಿದರು.
ಸಂಜೆ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಲಂಕಾರ, ಕೇಸರಿ ಬಣ್ಣದ ಭಂಟಿಂಗ್ಸ್, ಸ್ವಾಗತ ಕಮಾನುಗಳು, ದೇವಸ್ಥಾನದ ಹೊರಗೆ ಹೂವಿನಲಂಕಾರದ ಆಕರ್ಷಣೆಯಾಗಿತ್ತು.
ಇದನ್ನೂ ಓದಿ: ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ | ಡಿಸಿ, ಸಿಇಓ ಮನವಿ
ಈ ಸಮಯದಲ್ಲಿ ದೇವಾಲಯದ ಸುತ್ತಾ ದೀಪಗಳನ್ನು ಹಚ್ಚುವುದರ ಮೂಲಕ ವಿಜೃಂಭಣೆಯಿಂದ ಸ್ವಾಮಿಯ ಕಡೇ ಕಾರ್ತಿಕ ಮಹೋತ್ಸವ ಆಚರಣೆ ಮಾಡಲಾಯಿತು.
ವಿವಿಧ ಕಡೆಯಿಂದ ಆಗಮಿಸಿದ್ದ ನೂರಾರು ಭಕ್ತರು ಸ್ವಾಮಿಯ ದರ್ಶನ ಪಡೆದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

