
CHITRADURGA NEWS | 10 JULY 2024
ಚಿತ್ರದುರ್ಗ: ಕಾಯಕ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಚಿತ್ರದುರ್ಗ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ACADEMY; ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ ನೇಮಕ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬೆಂಗಳೂರು ಜಿಲ್ಲಾ ಶಾಖೆ ಚಿತ್ರದುರ್ಗ ವತಿಯಿಂದ ಆಯ್ಕೆ ಮಾಡಲಾಗಿದೆ.
ಜುಲೈ 13 ರಂದು ಬೆಳಿಗ್ಗೆ 10.30ಕ್ಕೆ ಬೀದರ್ ನಾ ಡಾ.ಚನ್ನಬಸವಪಟ್ಟ ದೇವರ ರಂಗಮಂದಿರದಲ್ಲಿ ಆರ್.ಸತ್ಯಣ್ಣನವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರಧಾನ ನೀಡಿ ಗೌರವಿಸಲಾಗುವುದು.
ಕೋಟೆ ವಾಯು ವಿಹಾರಿಗಳ ಸಂಘದ ಅಧ್ಯಕ್ಷರಾಗಿ ಕಳೆದ ಹತ್ತು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದು, ಕೋಟೆ ಸ್ಮಾರಕ ರಕ್ಷಣಾ ವೇದಿಕೆ ಖಜಾಂಚಿಯಾಗಿ, ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷರಾಗಿರುವ ಆರ್.ಸತ್ಯಣ್ಣ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ: JYOTHI RATHAYATRE | ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಶಾಖೆಯ ಎಲ್ಲಾ ಸದಸ್ಯರುಗಳು ತೆರಳುತ್ತಿದ್ದು, ಆರ್.ಸತ್ಯಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪರಿಷತ್‍ನ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್ ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
