CHITRADURGA NEWS | 18 NOVEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಿಸಲಿರುವ ವಿದ್ಯುತ್ ಸ್ಟೇಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 18 | ಹತ್ತಿ ರೇಟ್ ಎಷ್ಟಿದೆ?
ಬೆಂಗಳೂರಿನ ವಿಕಾಸೌಧದಲ್ಲಿ ಬೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬೀರೇನಹಳ್ಳಿ, ಕೋಡಿಹಳ್ಳಿ ಹಾಗೂ ದೇವರಕೊಟ್ಟ ಗ್ರಾಮಗಳ ಬಳಿ 66/11 ಕೆ.ವಿ ವಿದ್ಯುತ್ ಸ್ಥಾವರಗಳ ನಿರ್ಮಾಣ ಕಾಮಗಾರಿಗಳಿಗೆ ಜಮೀನು ನೀಡಲಾಗಿದ್ದು, ಸರ್ಕಾರದ ಹಂತದಲ್ಲಿ ಮಂಜೂರಾತಿಗೆ ಬಾಕಿ ಇದೆ. ಸರ್ಕಾರದ ಹಂತದಲ್ಲಿ ಮೊದಲನೇ ಹಂತದಲ್ಲಿ ಮಂಜೂರಾತಿಗೆ ಸಲ್ಲಿಸಲಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡು ಮಂಜೂರು ಮಾಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಹೇಳಿದರು.
ಹಿರಿಯೂರು ತಾಲ್ಲೂಕಿನ ಬುರುಜನರೊಪ್ಪ ಗ್ರಾಮದ ಬಳಿ 66/11 ಕೆ.ವಿ. ವಿದ್ಯುತ್ ಸ್ಥಾವರ ನಿರ್ಮಾಣ ಕಾಮಗಾರಿಗೆ ಸರ್ಕಾರಿ ಭೂಮಿ ಲಭ್ಯವಿಲ್ಲದೇ ಇರುವುದರಿಂದ ಖಾಸಗಿ ಜಮೀನು ಖರೀದಿಸಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು.
ಇದನ್ನೂ ಓದಿ: ಒಳಾಂಗಣ ಚಿತ್ರೀಕರಣಕ್ಕೆ ಭೂಮಿ ಮಂಜೂರಾತಿಗೆ ಮಹಬೂಬ್ ಪಾಷಾ ಜಿಲ್ಲಾಡಳಿತಕ್ಕೆ ಮನವಿ
ತಾಲ್ಲೂಕು ವಿ.ವಿ.ಸಾಗರ ಜಲಾಶಯದಿಂದ ಹಿರಿಯೂರು, ಹೊಳಲ್ಕೆರೆ ಹಾಗೂ ಚಿತ್ರದುರ್ಗ ತಾಲ್ಲೂಕುಗಳ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಮುಕ್ತಾಯದ ಹಂತದಲ್ಲಿರುತ್ತವೆ.
ಸದರಿ ಕಾಮಗಾರಿಗಳಿಂದ ಕುಡಿಯುವ ನೀರು ಪಂಪಿಂಗ್ ಮಾಡಲು ವೋಲ್ಟೇಜ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ, ಹಾಲಿ ಹಿರಿಯೂರು ತಾಲ್ಲೂಕು ಭರಮಗಿರಿ ವಿದ್ಯುತ್ ಉಪಕೇಂದ್ರದ 66/11 ಕೆ.ವಿ. 1*12.5 ಎಂ.ವಿ.ಎ. ಇಂದ 66/11 ಕೆ.ವಿ. 1*20 ಎಂ.ವಿ.ಎ. ಗೆ ಮೇಲ್ದರ್ಜೆಗೇರಿಸಲು ಪ್ರಸ್ತಾವನೆಯನ್ನು ಅಂದಾಜು ಪಟ್ಟಿಯೊಂದಿಗೆ ಸಲ್ಲಿಸಲಾಗಿದ್ದು, ಈ ಅಂದಾಜು ಪಟ್ಟಿಗೆ ಅನುಮೋದನೆ ನೀಡಿ ಕುಡಿಯುವ ನೀರು ಪೂರೈಕೆ ಹಿತದೃಷ್ಟಿಯಿಂದ ತುರ್ತಾಗಿ ಕಾಮಗಾರಿ ಕೈಗೊಳ್ಳುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಸೂಚಿಸಿದರು.
ಧರ್ಮಪುರ ಬಳಿ ಹೊಸಳ್ಳಿ ಬ್ಯಾರೇಜ್‍ನಿಂದ ಧರ್ಮಪುರ ಹೋಬಳಿ 09 ಕೆರೆಗಳಿಗೆ ನೀರು ಹರಿಸುತ್ತಿದ್ದು, ಈ ಬ್ಯಾರೇಜ್‍ನಿಂದ ನೀರು ಪಂಪಿಂಗ್ ಮಾಡಲು ಕಲಮರಹಳ್ಳಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಪದೇ ಪದೇ ವೋಲ್ಟೇಜ್ ಸಮಸ್ಯೆ ಆಗುತ್ತಿರುವುದರಿಂದ, ಹಾಲಿ ಇರುವ ಕಲಮರಹಳ್ಳಿ ವಿದ್ಯುತ್ ಉಪಕೇಂದ್ರದ 66/11 ಕೆ.ವಿ. 1*12.5 ಎಂ.ವಿ.ಎ. ಇಂದ 66/11 ಕೆ.ವಿ. 1*20 ಎಂ.ವಿ.ಎ. ಗೆ ಮೇಲ್ದರ್ಜೆಗೇರಿಸಲು ಪ್ರಸ್ತಾವನೆಯನ್ನು ಅಂದಾಜು ಪಟ್ಟಿಯೊಂದಿಗೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಅನುಮೋದನೆ ನೀಡಿ ಕೂಡಲೇ ಕಾಮಗಾರಿ ಕೈಗೊಳ್ಳಲು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ಸಭೆಯಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್, ಅಧೀಕ್ಷಕ ಅಭಿಯಂತರ ಎಸ್.ಕೆ.ಪಟೇಲ್, ಕೆ.ಪಿ.ಟಿ.ಸಿ.ಎಲ್. ಪ್ರಭಾರಿ ಮುಖ್ಯ ಇಂಜಿನೀಯರ್ ಕಾಂತಲಕ್ಷ್ಮೀ, ಅಧೀಕ್ಷಕ ಅಭಿಯಂತರ ಜಿ.ಎಂ.ರೇವಣಸಿದ್ದಪ್ಪ, ಕೆ.ಪಿ.ಟಿ.ಸಿ.ಎಲ್. ಕಾರ್ಯಪಾಲಕ ಇಂಜಿನೀಯರ್ ಹರೀಶ್ ಕುಮಾರ್, ಬೆಸ್ಕಾಂ ಕಾರ್ಯಪಾಲಕ ಇಂಜಿನೀಯರ್ ಅಶೋಕ್, ಎಇಇ ಬೆಸ್ಕಾಂ ಪೀರ್‌ಸಾಬ್, ಕೆ.ಪಿ.ಟಿ.ಸಿ.ಎಲ್ ಎಇಇ ರಿಯಾಜ್ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
