CHITRADURGA NEWS | 27 JUNE 2026
ಚಿತ್ರದುರ್ಗ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿ ಹಾಗೂ ವ್ಯವಸ್ಥಿತ ಆಡಳಿತ ವೈಖರಿಯನ್ನು ಇಂದಿನ ರಾಜಕಾರಣಿಗಳು, ಆಡಳಿತಗಾರರು ಮತ್ತು ಅಧಿಕಾರಿಗಳು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ’ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕೆಂಪೇಗೌಡರು ಅಂದು ಬೆಂಗಳೂರನ್ನು ಕಟ್ಟುವಾಗ ರೂಪಿಸಿದ ನೀಲನಕ್ಷೆ ಹಾಗೂ ಯೋಜನಾಬದ್ಧ ವಿನ್ಯಾಸ ಇಂದಿಗೂ ನಮಗೆಲ್ಲ ದಾರಿದೀಪವಾಗಿದೆ. ಇಂದು ಜಾಗತಿಕ ಮಟ್ಟದಲ್ಲಿ ಭಾರತದ ಸಿಲಿಕಾನ್ ಸಿಟಿ ಎಂದು ಹೆಮ್ಮೆಯಿಂದ ಕರೆಯಲ್ಪಡುವ ಬೆಂಗಳೂರಿಗೆ ಅವರೇ ಭದ್ರವಾದ ಅಡಿಪಾಯ ಹಾಕಿದವರು. ಪ್ರತಿಯೊಂದು ವ್ಯಾಪಾರ-ವಹಿವಾಟಿಗೂ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ಅಂದಿನ ಕಾಲದ ಅತ್ಯಂತ ವೈಭವೋಪೇತ ಹಾಗೂ ಮಾದರಿ ನಗರಿಯಾಗಿದ್ದ ವಿಜಯನಗರ ಸಾಮ್ರಾಜ್ಯದ ಹಂಪಿಯಿಂದ ಪ್ರೇರಿತರಾಗಿದ್ದ ಕೆಂಪೇಗೌಡರು, ಹಂಪಿಯ ಮಾದರಿಯಲ್ಲೇ ಬೆಂಗಳೂರನ್ನು ಸುಂದರ ನಗರಿಯನ್ನಾಗಿ ಕಟ್ಟಲು ಸಂಕಲ್ಪ ಮಾಡಿ ಯಶಸ್ವಿಯಾದರು. ಕೇವಲ ವ್ಯಾಪಾರವಷ್ಟೇ ಅಲ್ಲದೆ ಪರಿಸರ ಸಂರಕ್ಷಣೆಗೂ ಒತ್ತು ನೀಡಿ, ನಗರದ ನೀರಿನ ದಾಹ ನೀಗಿಸಲು ಬೃಹತ್ ಕೆರೆಗಳನ್ನೂ ನಿರ್ಮಿಸಿದ್ದರು ಎಂದು ತಿಳಿಸಿದರು.
ಇದನ್ನೂ ಓದಿ: ಹೈನುಗಾರಿಕೆ ಅತ್ಯಂತ ಲಾಭದಾಯಕ ಚಟುವಟಿಕೆ | ಡಾ.ತಿಪ್ಪೇಸ್ವಾಮಿ
ಅನ್ನಕ್ಕಿಂತ ಅಕ್ಷರ ಮುಖ್ಯ ಎಂಬುದನ್ನು ದೃಢವಾಗಿ ನಂಬಿದ್ದ ಕೆಂಪೇಗೌಡರು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಮುಂದಿನ ಪೀಳಿಗೆಗೆ ಉತ್ತಮ ವಿದ್ಯಾಭ್ಯಾಸ ಒದಗಿಸಿ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದು ಅವರ ಮುಖ್ಯ ಗುರಿಯಾಗಿತ್ತು. ಅವರ ಈ ಉನ್ನತ ದೂರದೃಷ್ಠಿಯ ಚಿಂತನೆಗಳು ಇಂದಿನ ಆಧುನಿಕ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದ್ದು, ನಾವೆಲ್ಲರೂ ಅವರ ಆದರ್ಶಗಳನ್ನು ಪಾಲಿಸಬೇಕಿದೆ ಎಂದು ಸಲಹೆ ನೀಡಿದರು.
ಒಕ್ಕಲಿಗರ ಅಭಿವೃದ್ಧಿ ನಿಗಮದ ವತಿಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸುಮಾರು 18ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಅದೇ ರೀತಿ, ಸ್ವಾವಲಂಬಿ ಸಾರಥಿ ಯೋಜನೆಯಡಿ 6 ಜನಕ್ಕೂ ಹೆಚ್ಚು ಫಲಾನುಭವಿಗಳಿಗೆ ಕಾರುಗಳನ್ನು ವಿತರಿಸುವ ಮೂಲಕ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಡಲಾಗಿದೆ.
ಇದನ್ನೂ ಓದಿ: ಭಾವೈಕ್ಯತೆಗೆ ಸಾಕ್ಷಿಯಾದ ಪೀರಲ ಹಬ್ಬ | ಜಿಲ್ಲೆಯ ವಿವಿಧೆಡೆ ಆಚರಣೆ
ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 19 ಫಲಾನುಭವಿಗಳಿಗೆ ಉಚಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಇಂದಿನ ಸುಸಜ್ಜಿತ ಹಾಗೂ ಬೃಹತ್ ಬೆಂಗಳೂರು ನಗರಕ್ಕೆ ನೂರಾರು ವರ್ಷಗಳ ಹಿಂದೆಯೇ ಶಾಶ್ವತ ಭದ್ರಬುನಾದಿ ಹಾಕಿದ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಮತ್ತು ಆಡಳಿತ ವೈಖರಿ ಇಂದಿನ ಆಡಳಿತಗಾರರಿಗೆ ದೊಡ್ಡ ಮಾದರಿಯಾಗಿದೆ ಎಂದರು.
ಕೆಂಪೇಗೌಡರು ನಾಡಪ್ರಭು ಮಾತ್ರವಲ್ಲದೆ, ಸಮರ್ಥ ಆಡಳಿತಗಾರ ಹಾಗೂ ದೂರದೃಷ್ಟಿಯುಳ್ಳ ನಾಯಕರಾಗಿದ್ದರು. ಮೂಲತಃ ಕೃಷಿಕರಾಗಿದ್ದ ಅವರು ಕೃಷಿ ಚಟುವಟಿಕೆಗಳ ಜೊತೆಗೆ ವ್ಯಾಪಾರೀಕರಣಕ್ಕೂ ಒತ್ತು ನೀಡಿದರು. ನಗರದಲ್ಲಿ ವಿವಿಧ ವೃತ್ತಿಗಳಿಗೆ ಅನುಗುಣವಾಗಿ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿದ್ದು, ಕೆರೆ-ಕಟ್ಟೆಗಳನ್ನು ಕಟ್ಟಿಸಿದ್ದು ಅವರ ಆಡಳಿತಾತ್ಮಕ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಇದು ಇಂದಿನ ಆಡಳಿತಗಾರರಿಗೆ ಒಂದು ಪಾಠವಾಗಿದೆ ಎಂದರು.
ಇದನ್ನೂ ಓದಿ: INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಪರಿಸರ ಸಂರಕ್ಷಣೆಗಾಗಿ 15 ಲಕ್ಷ ಗಿಡ ನೆಡುವ ಬೃಹತ್ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ಕೆಂಪೇಗೌಡರು ನಿರ್ಮಿಸಿದ ‘ಉದ್ಯಾನನಗರಿ’ಯ ಹಸಿರನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ಎಸ್.ಸೌಮ್ಯ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡರ ಜೀವನ ಮತ್ತು ಸಾಧನೆ ಕುರಿತು ಹಮ್ಮಿಕೊಂಡಿದ್ದ ಪ್ರಬಂಧ, ಕವನ ವಾಚನ, ಚಿತ್ರಕಲೆ ಹಾಗೂ ಆಶು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಜಾ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಪಿ.ಚೇತನ್, ಕಾರ್ಯದರ್ಶಿ ಎಸ್.ಜಗನ್ನಾಥ್, ಮುಖಂಡರಾದ ಲಕ್ಷ್ಮೀಕಾಂತ್, ಕಂದಿಕೆರೆ ಸುರೇಶ್ ಬಾಬು, ಪ್ರಸನ್ನ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

