
CHITRADURGA NEWS | 03 APRIL 2026
ಚಿತ್ರದುರ್ಗ: ಚಿತ್ರದುರ್ಗದ ಕೇಂದ್ರಿಯ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಏಪ್ರಿಲ್ 13 ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
ವಿವಿಧ ವಿಷಯಗಳವಾರು ಪ್ರಾಥಮಿಕ ಶಾಲಾ ಶಿಕ್ಷಕರು, ಕಂಪ್ಯೂಟರ್, ಯೋಗ ಹಾಗೂ ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ನರ್ಸ್, ವಿಶೇಷ ಶಿಕ್ಷಕರು ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಸಂದರ್ಶನವು ಇದೇ ಏಪ್ರಿಲ್ 13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಬೆಳಿಗ್ಗೆ 11:30 ರಿಂದ ಆರಂಭವಾಗುವುದು. ಅಭ್ಯರ್ಥಿಗಳು ಬೆಳಿಗ್ಗೆ 9 ಗಂಟೆಯಿAದ 11 ಗಂಟೆಯ ಒಳಗಾಗಿ ವರದಿ ಮಾಡಿಕೊಳ್ಳಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಒಂದು ಸೆಟ್ ಸ್ವಯಂ ದೃಢೀಕೃತ ಛಾಯಾಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ಪೋರ್ಟಲ್ https://samvida-sathi.kvs.gov.in/ ನಲ್ಲಿ ನೋಂದಾಯಿಸಿಕೊಳ್ಳಬೇಕು.
ಇದನ್ನೂ ಓದಿ: ಜೋಗಿಮಟ್ಟಿಯಲ್ಲಿ ವಾಚ್ ಟವರ್ ನಿರ್ಮಾಣಕ್ಕೆ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರ ಮನವಿ
ಶೈಕ್ಷಣಿಕ ಅರ್ಹತೆಗಳು ಕೇಂದ್ರಿಯ ವಿದ್ಯಾಲಯದ ನಿಯಮಾವಳಿಗಳ ಪ್ರಕಾರ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿದ್ಯಾಲಯದ ನೋಟಿಸ್ ಬೋರ್ಡ್ ಅಥವಾ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

