ಮುಖ್ಯ ಸುದ್ದಿ
ಶೀಘ್ರದಲ್ಲೇ ಕೇಂದ್ರೀಯ ವಿದ್ಯಾಲಯ | ಗೋವಿಂದ ಕಾರಜೋಳ
CHITRADURGA NEWS | 30 JUNE 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೆ ಕೇಂದ್ರೀಯ ವಿದ್ಯಾಲಯ ಪ್ರಾರಂಭವಾಗಿಲ್ಲ. ಈ ನಿಟ್ಟಿನಲ್ಲಿ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಗೋವಿಂದ ಕಾರಜೋಳ ಕಾರ್ಯಪ್ರವೃತ್ತರಾಗಿದ್ದಾರೆ.
ಮೊದಲ ಅಧಿವೇಶನಕ್ಕೆ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
ಈ ಹಿಂದೆಯೇ ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಮಾಡಲಾಗಿತ್ತು. ಕಟ್ಟಡವೂ ಅಂತಿಮವಾಗಿತ್ತು. ಆದರೆ, ತರಗತಿಗಳು ಪ್ರಾರಂಭವಾಗಿರಲಿಲ್ಲ. ಈ ವರ್ಷ ವಿದ್ಯಾಲಯ ಕಾರ್ಯಾರಂಭ ಮಾಡಬೇಕು ಎಂದು ಮನವಿ ಮಾಡಿ ಪತ್ರವನ್ನೂ ಕೊಟ್ಟಿದ್ದಾರೆ.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸುವ ಕುರಿತು ಸಂಸದ ಗೋವಿಂದ ಕಾರಜೋಳ ಅವರಿಗೆ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: EXPRESS ರೈಲುಗಳ ನಿಲುಗಡೆ ಕೋರಿ ಕೇಂದ್ರ ಸಚಿವರಿಗೆ ಗೋವಿಂದ ಕಾರಜೋಳ ಮನವಿ
ಜಿಲ್ಲೆಯ ಬಹುದಿನಗಳ ಕನಸಾಗಿರುವ ಕೇಂದ್ರೀಯ ವಿದ್ಯಾಲಯ ಈ ವರ್ಷವಾದರೂ ಕಾರ್ಯರಂಭ ಮಾಡಬಹುದೇ ಎನ್ನುವು ಹೊಸ ನಿರೀಕ್ಷೆಯೊಂದಿಗೆ ಜಿಲ್ಲೆಯ ಜನರಲ್ಲಿ ಮತ್ತೆ ಹೊಸ ಕನಸು ಚಿಗುರೊಡೆದಿದೆ.