CHITRADURGA NEWS | 25 JULY 2026
ಚಿತ್ರದುರ್ಗ: ಚಿತ್ರದುರ್ಗದ ಜಾಲಿಕಟ್ಟೆ ಬಳಿ ಮೀಸಲಾಗಿಸಿರುವ 5 ಎಕರೆ ಜಾಗದಲ್ಲಿ ಶೀಘ್ರದಲ್ಲಿಯೇ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ನಗರದ ಕೇಂದ್ರೀಯ ವಿದ್ಯಾಶಾಲೆಗೆ ಸಂಸದರು ಭೇಟಿ ನೀಡಿ 2026-27 ನೇ ಸಾಲಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು.
ಈ ಬಗ್ಗೆ ಈಗಾಗಲೇ ಸಮಗ್ರ ಯೋಜನಾ ವರದಿ ಸಿದ್ದಪಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ 800 ವಿದ್ಯಾರ್ಥಿಗಳಿಗೆ ಸ್ವಂತ ಕಟ್ಟಡದಲ್ಲಿ ಪ್ರವೇಶವಕಾಶ ಒದಗಿಸಲಾಗುವುದು ಎಂದರು.
ಬಹುವರ್ಷಗಳ ಬೇಡಿಕೆಯಾಗಿದ್ದ ಕೇಂದ್ರೀಯಾ ವಿದ್ಯಾಲಯವನ್ನು ಚಿತ್ರದುರ್ಗದಲ್ಲಿ ಪ್ರಾರಂಭ ಮಾಡಲು ಡಿಸೆಂಬರ್ 2024 ರಲ್ಲಿ ಕೇಂದ್ರ ಸರ್ಕಾರ ಮಂಜೂರು ಮಾಡಿತು. ಈ ಮೊದಲು ಕುಂಚಿಗನಾಳ್ ಬಳಿ ಕೇಂದ್ರೀಯಾ ವಿದ್ಯಾಲಯ ಶಾಲೆಗೆ 10 ಎಕರೆ ಜಮೀನು ನಿಗಧಿಪಡಿಸಲಾಗಿತ್ತು, ಆದರೆ, ಸದರಿ ಜಮೀನಿನ ಕುರಿತು ವ್ಯಾಜ್ಯ ನ್ಯಾಯಾಲಯದಲ್ಲಿದ್ದ ಕಾರಣ ಈ ಜಮೀನಿನ ಬದಲಾಗಿ ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಜಾಲಿಕಟ್ಟೆ ಗ್ರಾಮದ ಬಳಿ 5 ಎಕರೆ ಜಮೀನನ್ನು ಕೇಂದ್ರೀಯ ವಿದ್ಯಾಶಾಲೆಗೆ ನೀಡಲಾಗಿದೆ.
ಇದನ್ನೂ ಓದಿ: ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್
ಈಗಾಗಲೇ 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1 ನೇ ತರಗತಿಯಿಂದ 5 ನೇ ತರಗತಿಯವರೆಗೆ ದಾಖಲಾತಿಗಳು ನಡೆದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಶಾಲೆಯನ್ನು ಪ್ರಾರಂಭಿಸಲಾಗಿದೆ.
ಜಾಲಿಕಟ್ಟೆ ಗ್ರಾಮದ 5 ಎಕರೆ ಜಾಗದಲ್ಲಿ ಕೇಂದ್ರೀಯ ವಿದ್ಯಾಶಾಲೆ ಸ್ವಂತ ಕಟ್ಟಡ ಹೊಂದಲು ಬೇಕಾದ ಎಲ್ಲಾ ಸಿದ್ದತೆಯನ್ನು ಮಾಡಿಕೊಳ್ಳಲು ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.
ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಸ್ತಾವನೆ ಸಿದ್ದಪಡಿಸಿ ಕೇಂದ್ರ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗುವುದು, ಅತೀ ಶೀಘ್ರವಾಗಿ ಸ್ವಂತ ಕಟ್ಟಡಕ್ಕೆ ಬೇಕಾಗುವ ಅನುದಾನವನ್ನು ಮಂಜೂರು ಮಾಡಿಸಲಾಗುವುದು.
ಇದನ್ನೂ ಓದಿ: ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ
ದೇಶಾದ್ಯಂತ ಸುಮಾರು 1256 ಕ್ಕೂ ಹೆಚ್ಚು ಕೇಂದ್ರೀಯಾ ವಿದ್ಯಾಶಾಲೆಗಳಿದ್ದು, ಈ ಶಾಲೆಗಳಲ್ಲಿ ಸುಮಾರು 13.50 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚಿತ್ರದುರ್ಗದ ಕೇಂದ್ರೀಯಾ ವಿದ್ಯಾಶಾಲೆಯಲ್ಲಿಯೂ ಸಹ ಸದ್ಯ 200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಇವರೆಲ್ಲರಿಗೂ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ ಎಂದರು.
ಭಾರತೀಯ ರಕ್ಷಣಾ ಪಡೆ, ಸಶಸ್ತ್ರ ಪಡೆಗಳು, ಹಾಗೂ ಕೇಂದ್ರ ಸರ್ಕಾರದ ವರ್ಗಾವಣೆಗೊಳ್ಳುವ ಉದ್ಯೋಗಿಗಳ ಮಕ್ಕಳಿಗೆ ದೇಶದ ಯಾವುದೇ ಭಾಗಕ್ಕೆ ಹೋದರೂ ಶಿಕ್ಷಣಕ್ಕೆ ತೊಂದರೆಯಾಗದಂತೆ ಒಂದೇ ರೀತಿಯ ಪಠ್ಯಕ್ರಮವನ್ನು ಒದಗಿಸುವ ಉದ್ದೇಶದಿಂದ ಈ ಶಾಲೆಗಳು ಪ್ರಾರಂಭವಾಗಿವೆ.
ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಟತೆಯನ್ನು ಕಾಯ್ದುಕೊಳ್ಳುವುದು ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು, ದೇಶದ ವಿವಿಧ ರಾಜ್ಯ, ಭಾಷೆ ಮತ್ತು ಸಂಸ್ಕೃತಿಗಳ ಮಕ್ಕಳು ಒಟ್ಟಿಗೆ ಕಲಿಯುವುದರಿಂದ ಮಕ್ಕಳಲ್ಲಿ ಭಾರತೀಯತೆ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವುದು ಈ ಶಾಲೆಗಳ ಸ್ಥಾಪನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಇದನ್ನೂ ಓದಿ: ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
ಈ ಸಂದರ್ಭದಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಮನಿಷ್ ಶೈನಿ, ಮುಖಂಡರುಗಳಾದ ಮಡನಾಯ್ಕನಹಳ್ಳಿ ಲಿಂಗರಾಜ್, ಬಿಜೆಪಿ ಜಿಲ್ಲಾ ವಕ್ತಾರರಾದ ನಾಗರಾಜ್ ಬೇದ್ರೆ, ಎಸ್ಸಿ ಮೋರ್ಚಾ ಪರಶುರಾಮ್, ಪ್ರೇಮನಾಥ್, ದಿಶಾ ಸಮಿತಿ ಸದಸ್ಯರಾದ ಭರತ್, ಬಂಜಾರ್ ಸಮಾಜದ ಮುಖಂಡರಾದ ಸತೀಶ್, ಬ್ಯಾಲಹಾಳ್ ರವಿಕುಮಾರ್, ನಾಗೇಂದ್ರ, ಸೇರಿದಂತೆ ಇತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

