CHITRADURGA NEWS | 10 APRIL 2026
ಚಿತ್ರದುರ್ಗ: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಕೆ.ಜಿ.ಜಗದೀಶ್ ಅವರು ಹೊಸಪೇಟೆಯಿಂದ ಬೆಂಗಳೂರಿಗೆ ಹೋಗುವ ವೇಳೆ ಚಿತ್ರದುರ್ಗ ಹೊರವಲಯ ದಾವಣಗೆರೆ ರಸ್ತೆಯಲ್ಲಿರುವ ಮೇದಾರ ಕೇತೇಶ್ವರ ಮಹಾ ಮಠಕ್ಕೆ ಭೇಟಿ ನೀಡಿ ಸ್ವಾಮಿಜಿ ಆಶೀರ್ವಾದ ಪಡೆದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
ಈ ವೇಳೆ ಮಾತನಾಡಿದ ಕೆ.ಜಿ.ಜಗದೀಶ್, ಶಿಕ್ಷಣವೆಂದರೆ ದೊಡ್ಡ ದೊಡ್ಡ ಕಟ್ಟಗಳನ್ನು ನೋಡಿ ನಿರ್ಧರಿಸುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಹೆಚ್ಚಿನ ಅಂಕಗಳನ್ನು ಗಳಿಸುವಂತೆ ಸಿದ್ದಪಡಿಸುವುದು ಶಿಕ್ಷಕರುಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಮಠದ ಆವರಣದಲ್ಲೆಲ್ಲಾ ಸುತ್ತಾಡಿ ಶಾಲೆ ಹಾಗೂ ಕಟ್ಟಡಗಳನ್ನು ವೀಕ್ಷಿಸಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬಡವರ ಮಕ್ಕಳೆ ಹೆಚ್ಚಾಗಿ ದಾಖಲಾಗುತ್ತಾರೆ. ಖಾಸಗಿ ಶಾಲೆಗಳವರು ಬೃಹಧಾಕಾರವಾದ ಕಟ್ಟಡಗಳನ್ನು ಕಟ್ಟಿ ಪೋಷಕರು ಮತ್ತು ಮಕ್ಕಳನ್ನು ಆಕರ್ಷಿಸುವುದು ಸಹಜ. ಆದರೆ ಬಡ ಮಕ್ಕಳು ಖಾಸಗಿ ಶಾಲೆಗಳಿಗೆ ಸೇರುವಂತ ಸ್ಥಿತಿಯಲ್ಲಿರುವುದಿಲ್ಲ. ನಿರ್ವಂಚನೆಯಿಂದ ಮಕ್ಕಳಿಗೆ ಪಾಠ ಹೇಳಿಕೊಟ್ಟು ಸರ್ಕಾರಿ ಶಾಲೆಗಳಿಗೆ ಒಳ್ಳೆಯ ಕೀರ್ತಿ ತರಬೇಕೆಂದು ಶಿಕ್ಷಕರುಗಳಿಗೆ ಸೂಚಿಸಿದರು.
ಇದನ್ನೂ ಓದಿ: ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ
ಈ ಸಂದರ್ಭದಲ್ಲಿ ಮೇದಾರ ಕೇತೇಶ್ವರ ಮಹಾ ಮಠದ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ, ಮಠದ ಅಧ್ಯಕ್ಷ ಸಿ.ಪಿ.ಪಾಟೀಲ್, ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರುಗಳಾದ ಮಹೇಶ್ ಅಂಗಡಿ, ದುರ್ಗಾನಾಯ್ಕ, ತಹಶೀಲ್ದಾರ್ ಗೋವಿಂದರಾಜ್, ಪರಿಶಿಷ್ಟ ಪಂಗಡ ಇಲಾಖೆಯ ಅಧಿಕಾರಿ ದಿವಾಕರ್, ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಹಾಗೂ ಶಿಕ್ಷಕ ವೃಂದದವರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

