
CHITRADURGA NEWS | 02 SEPTEMBER 2026
ಚಿತ್ರದುರ್ಗ: ರಕ್ತದಾನ ಅತಿ ಅಮೂಲ್ಯವಾದ ಸೇವೆಯಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವವರಿಗೆ ಸಮಯಕ್ಕೆ ಸರಿಯಾಗಿ ರಕ್ತ ದೊರೆಯುವುದು ಅತ್ಯಂತ ಅಗತ್ಯ ಎಂದು ವಕೀಲರ ಸಂಘದ ಅಧ್ಯಕ್ಷ ಮಹೇಶ್ವರಪ್ಪ ಹೇಳಿದರು.
ಇದನ್ನೂ ಓದಿ: ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಆರೋಪ | ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ ಅಂಗವಾಗಿ ಬುರುಜನಹಟ್ಟಿಯಲ್ಲಿ ಫೋರ್ಟ್ ಲಯನ್ಸ್ ರಕ್ತ ಕೇಂದ್ರದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
18ರಿಂದ 60 ವರ್ಷದೊಳಗಿನ ಆರೋಗ್ಯವಂತರು ನಿಯಮಾನುಸಾರ ನಿಯಮಿತವಾಗಿ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ನಿಶ್ಯಕ್ತಿ ಉಂಟಾಗುತ್ತದೆ ಎಂಬುದು ತಪ್ಪು ಕಲ್ಪನೆಯಾಗಿದೆ ಎಂದು ತಿಳಿಸಿದರು.
ನ್ಯಾಯವಾದಿ ಮುಸ್ತಾಫ ಮಾತನಾಡಿ, ಅಪಘಾತ, ಹೆರಿಗೆ ಸೇರಿದಂತೆ ವಿವಿಧ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ಆಂಧ್ರ DCM ಪವನ್‌ಕಲ್ಯಾಣ್ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ನವಿಲೆಹಾಳ್ ನಟರಾಜ್, ಸುರೇಶ್, ರಾಜೀವ್, ರಾಜಪ್ಪ, ಅಶೋಕ್ ಬೆಳಗಟ್ಟ, ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಮನಿರ್ದೇಶಿತ ಸದಸ್ಯ ಪ್ರಶಾಂತ್ ಕೂಲಿಕಾರ್, ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ರಾಜೇಂದ್ರ, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ರಾಜ್ಯಾಧ್ಯಕ್ಷ ರಂಗಸ್ವಾಮಿ, ಕೋಡೇನಹಟ್ಟಿ ನಾಗೇಂದ್ರಪ್ಪ, ನವೀನ್, ಜಯಸೂರ್ಯ, ಚೇತನ್, ನಾಗರಾಜ್ ಹಾಗೂ ಕುಮಾರ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

