
CHITRADURGA NEWS | 28 DECEMBER 2025
ಚಿತ್ರದುರ್ಗ: ಬಾಂಗ್ಲಾ ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಇದರ ಲಾಭ ಪಡೆದ ಅಲ್ಲಿನ ಕಿಡಿಗೇಡಿಗಳು ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಅಮಾಯಕ ಹಿಂದು ಯುವಕರನ್ನು ಬರ್ಭರವಾಗಿ ಕೊಲೆ ಮಾಡುತ್ತಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 27 | ತೀರ್ಥಹಳ್ಳಿ, ಹೊನ್ನಾಳಿ ಮಾರುಕಟ್ಟೆ ವರದಿ

ನಗರದ ಆನೆಬಾಗಿಲು ಮುಂಭಾಗದಿಂದ ಆರಂಭವಾದ ಪಂಜಿನ ಮೆರವಣಿಗೆ ಮೆರವಣಿಗೆ ಗಾಂಧಿ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಸಂಚರಿಸಿ ವೀರವನಿತೆ ಒನಕೆ ಓಬವ್ವ ವೃತ್ತ ತಲುಪಿತು. ನಂತರ ಹತ್ಯೆಯಾದ ದೀಪು ಚಂದ್ರದಾಸ್‌ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಾಂಗ್ಲಾದಲ್ಲಿ ನಡೆದ ದುಷ್ಕೃತ್ಯ ವಿಶ್ವದ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಹಿಂದುಗಳ ಮೇಲೆ ಹಲ್ಲೆ, ದೌರ್ಜನ್ಯ, ಹತ್ಯೆ ಪ್ರಕರಣಗಳು ಆಗಿಂದಾಗ್ಗೆ ನಡೆಯುತ್ತಿವೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ದೇಶ ಮತ್ತು ರಾಜ್ಯಗಳಲ್ಲಿ ಹಿಂದುಗಳನ್ನೇ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಘಟನೆ ಮರುಕಳಿಸುತ್ತಿವೆ. ಪಶ್ಚಿಮ ಬಂಗಾಳದಲ್ಲೂ ಹಿಂದು ಧರ್ಮೀಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇದಕ್ಕೆ ಕಡಿವಾಣ ಬೀಳಲು ಹಿಂದುಗಳಲ್ಲಿ ಒಗ್ಗಟ್ಟು ಅಗತ್ಯ ಎಂದರು.
ಇದನ್ನೂ ಓದಿ: ಡೆಸ್ಟಿನಿ ಲೋಗೋ ಅನಾವರಣ | ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಈ ವೇಳೆ ವಿಎಚ್‌ಪಿ ಪ್ರಾಂತ ಉಪಾಧ್ಯಕ್ಷ ಡಾ.ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಕೇಶವ್, ಭಾನುಮೂರ್ತಿ, ಬಾಲಕೃಷ್ಣ, ದೀಪಕ್‌ರಾಜ್, ರಂಗಸ್ವಾಮಿ, ವಿನಯ್, ಸಚ್ಚಿನ್, ತೇಜೇಶ್ವರ್ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
