Connect with us

    Kisan Credit Card: ಸಾಲ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ | ಕಡಿಮೆ ಬಡ್ಡಿ ದರ

    Kisan Credit Card

    ಮುಖ್ಯ ಸುದ್ದಿ

    Kisan Credit Card: ಸಾಲ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ | ಕಡಿಮೆ ಬಡ್ಡಿ ದರ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 13 SEPTEMBER 2024
    ಚಿತ್ರದುರ್ಗ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್‌ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್‌ 15 ರಿಂದ 2025 ಮಾರ್ಚ್‌ 31ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.

    ಕ್ಲಿಕ್ ಮಾಡಿ ಓದಿ: ಗಣೇಶ ಮೂರ್ತಿ ವಿಸರ್ಜನೆಯಲ್ಲಿ ನಿಯಮ ಉಲ್ಲಂಘನೆ | ಡಿ.ಜೆ ಸೌಂಡ್‌ ಸಿಸ್ಟಂ ವಶ

    ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top