CHITRADURGA NEWS | 24 October 2026
ಚಿತ್ರದುರ್ಗ: 1857ರ ಸಿಪಾಯಿ ದಂಗೆಗಿಂತಲೂ ಮೊದಲೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯದ ಕಹಳೆ ಊದಿ, ನಾಡಿನ ರಕ್ಷಣೆಗಾಗಿ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ ಮತ್ತು ಸಾಹಸ ಪ್ರತಿಯೊಬ್ಬರಿಗೂ ಹಾಗೂ ವಿಶೇಷವಾಗಿ ಈ ನೆಲದ ಹೆಣ್ಣುಮಕ್ಕಳಿಗೆ ಸ್ವಾವಲಂಬನೆ ಮತ್ತು ದೇಶದಪ್ರೇಮದ ದೊಡ್ಡ ಪ್ರೇರಣೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅ.31ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಬ್ರಿಟಿಷರ ವಿರುದ್ಧ ಧೀರತನದಿಂದ ಹೋರಾಡಿದ ಚೆನ್ನಮ್ಮನವರು, ತಮ್ಮ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನಂತಹ ವೀರರನ್ನು ಉರಿದುಂಬಿಸಿ ನಾಡು-ನುಡಿಯನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆನ್ನಮ್ಮನವರ ಶೌರ್ಯ ಸ್ಮರಿಸುವ ನಿಟ್ಟಿನಲ್ಲಿ ‘ಕಿತ್ತೂರು ಉತ್ಸವ’ ಅತ್ಯಂತ ಪ್ರಸಿದ್ಧಿ ಪಡೆದುಕೊಂಡಿದೆ ಎಂದರು.
ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ಸಮುದಾಯಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮತ್ತಷ್ಟು ವಿಜೃಂಭಣೆಯಿಂದ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಕಾರ್ಮಿಕ ಅಧಿಕಾರಿ ಅನಿಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಮುಖಂಡರಾದ ಮಹಡಿ ಶಿವಮೂರ್ತಿ, ಜೀತೇಂದ್ರ, ಮೋಕ್ಷಾ ರುದ್ರಸ್ವಾಮಿ, ರೀನಾ ವೀರಭದ್ರಪ್ಪ, ಉಷಾ, ಗಜೇಂದ್ರ, ಚಿನ್ಮಯಾನಂದ, ಕೆಪಿಎಂ ಗಣೇಶಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

